ಮಂಗಳೂರು : ಕಸ್ಟಮ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಭಟ್ಕಳದ ವ್ಯಕ್ತಿಯನ್ನು ಶುಕ್ರವಾರ ಮೇ 26 ರಂದು ಬಂಧಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಿದ್ದಿಕ್ ಮಿಕ್ದಿಮ್ ಹುಸೈನ್ ಎಂಬಾತ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕ. ಆತ ದುಬೈನಿಂದ ಏರ್ ಇಂಡಿಯಾ ವಿಮಾನ IX 384 ಮೂಲಕ ಆಗಮಿಸಿದ್ದ.
ಈತನ ತಪಾಸಣೆ ನಡೆಸಿದಾಗ ಗುದನಾಳದಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಈತನಿಂದ 24 ಕ್ಯಾರೆಟ್ ಪರಿಶುದ್ಧತೆಯ 262 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ರೂ. 13,17,860 ಎಂದು ಅಂದಾಜಿಸಲಾಗಿದೆ.
ಚಿನ್ನವನ್ನು ವಶಕ್ಕೆ ಪಡೆದುಕೊಂಡ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು ಪ್ರಯಾಣಿಕ ಹುಸೈನ್ನನ್ನು ವಿಚಾರಣೆ ನಡೆಸುತ್ತಿದ್ದಾರೆ.
Click this button or press Ctrl+G to toggle between Kannada and English