ಗದಗ : ಮೂಲತಃ ಗದಗ ಜಿಲ್ಲೆಯವರಾದ ತೆಲಂಗಾಣ ರಾಜ್ಯದ ಸೈಬರಾಬಾದ ಪೋಲಿಸ್ ಆಯುಕ್ತರಾಗಿರುವ ಹಿರಿಯ ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನರ ಅವರು ಕೋವಿಡ್ ಸೋಂಕು ನಿಯಂತ್ರಣಕ್ಕೆ ಅಗತ್ಯವಾಗಿರುವ ಅಂದಾಜು 40 ಲಕ್ಷ ಮೌಲ್ಯದ ವೈದ್ಯಕೀಯ ಔಷಧಿ ಸಾಮಗ್ರಿಗಳನ್ನು ಗದಗ ಜಿಲ್ಲಾಡಳಿತಕ್ಕೆ ಕಳುಹಿಸುವ ಮೂಲಕ ನೆರವು ನೀಡಿದ್ದಾರೆ.
ಆಕ್ಸಿಜನ್ ಕಾನ್ಸ್ಂಟ್ರೇಟರ್ (22), ಆಕ್ಸಿಜನ ಸಿಲಿಂಡರ್ (84), ಕೋವಿಡ್ ಕಿಟ್ (2000), ಮಾಸ್ಕ (20000), ಸ್ಯಾನಿಟೈಸರ್ (200 ಲೀಟರ್), ಫೇಸ್‌ಶೀಲ್ಡ್ (1000), ರೆಮಿಡಿಸಿವರ್ (24 ಯುನಿಟ್) ಸೇರಿದಂತೆ ಇತರ ಔಷಧಿ ಸಾಮಗ್ರಿಗಳನ್ನು ಗದಗ ಜಿಲ್ಲಾಡಳಿತಕ್ಕೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಹಿರಿಯ ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನರ ಅವರ ಸಹೋದರ ಹುಬ್ಬಳ್ಳಿಯ ಸಾಯಿ ಮಲ್ಟಿಸ್ಪೇಷಾಲಿಟಿ ಕ್ಲಿನಿಕ್‌ನ ಡಾ.ಎಂ.ಸಿ.ಸಜ್ಜನರ ಅವರು ಶುಕ್ರವಾರ ಜಿಲ್ಲಾಡಳಿತದ ಭವನದ ಆವರಣದಲ್ಲಿ ವೈಧ್ಯಕೀಯ ಔಷಧಿ ಸಾಮಾಗ್ರಿಗಳನ್ನು ಹಸ್ತಾಂತರಿಸಿದರು.
ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್ ಬ್ಯುರೋ.
Click this button or press Ctrl+G to toggle between Kannada and English