ಮದುವೆಯಾದ ನಾಲ್ಕೇ ದಿನಕ್ಕೆ ಮದುಮಗಳನ್ನು ಬಲಿ ಪಡೆದ ಕೊರೋನಾ

11:49 AM, Saturday, May 29th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Poojaಶಿವಮೊಗ್ಗ: ನವವಿವಾಹಿತೆಯೊಬ್ಬರು ಕೊರೋನಾ  ಮಹಾಮಾರಿಯಿಂದ ಜೀವ ಕಳೆದುಕೊಂಡಿದ್ದು, ಮದುವೆ ಖುಷಿಯಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

ಮೇ 24ರ ಸೋಮವಾರದಂದು ವಿವಾಹವಾದ ನಾಲ್ಕೇ ದಿನಕ್ಕೆ ನವವಿವಾಹಿತೆ ಪೂಜಾ (27) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಶಿವಮೊಗ್ಗದ ನಿದಿಗೆಯ ಪೂಜಾ ಹಾಗೂ ಹರಿಗೆಯ ಮಹೇಶ್ ಜೊತೆ ಸೋಮವಾರ ವಿವಾಹ ನಡೆದಿತ್ತು. ಸೋಮವಾರ ವಿವಾಹ ಗುರುವಾರ ಸಂಜೆ ಪೂಜಾ ಮೃತಪಟ್ಟಿದ್ದಾರೆ.

ವಿವಾಹವಾದ ಎರಡೇ ದಿನಕ್ಕೆ ಪೂಜಾಗೆ ಮೈಕೈ ನೋವು ಕಾಣಿಸಿಕೊಂಡಿದೆ. ಹೀಗಾಗಿ ಅವರು ಮಲವಗೊಪ್ಪದ ಖಾಸಗಿ ಕ್ಲಿನಿಕ್ ನಲ್ಲಿ ಚಿಕಿತ್ಸೆ ಪಡೆದಿದ್ದರು.  ಈ ವೇಳೆ ಯುವತಿಗೆ ಮೆಗ್ಗಾನ್ ಆಸ್ಪತ್ರೆಗೆ ಹೋಗುವಂತೆ ವೈದ್ಯರು ಸೂಚಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು. ಪೂಜಾ ಮೃತಪಟ್ಟ ನಂತರ ವೈದ್ಯರು ಕೊರೊನಾ ಪರೀಕ್ಷೆ ನಡೆಸಿದ್ದಾರೆ. ಈ ವೇಳೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಒಟ್ಟಿನಲ್ಲಿ ಇದೀಗ ಹೊಸ ಜೀವನದ ಕನಸು ಕಾಣುತ್ತಿದ್ದ ಯುವತಿಯನ್ನು ಹೆಮ್ಮಾರಿ ಬಲಿಪಡೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English