- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕೊರೋನ ಸೋಂಕು ಮೇ 29 : ದ.ಕ. ಜಿಲ್ಲೆ 923 – 7 ಸಾವು, ಉಡುಪಿ ಜಿಲ್ಲೆ- 684 – 3 ಸಾವು, ಕಾಸರಗೋಡು – 506

corona Case [1]ಮಂಗಳೂರು : ದ.ಕ. ಜಿಲ್ಲೆಯಲ್ಲಿ ಶನಿವಾರ 923 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ ಮತ್ತು  7 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

ಮರಣ ಹೊಂದಿದವರಲ್ಲಿ ಮಂಗಳೂರು, ಬೆಳ್ತಂಗಡಿ, ಬಂಟ್ವಾಳದಲ್ಲಿ ತಲಾ ಎರಡು ಮತ್ತು ಪುತ್ತೂರಿನಲ್ಲಿ ಒಬ್ಬರು ಸೇರಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 901ಕ್ಕೇರಿದೆ. ಅಲ್ಲದೆ ಶನಿವಾರ ಜಿಲ್ಲೆಯಲ್ಲಿ

ಜಿಲ್ಲೆಯಲ್ಲಿ 9,345 ಸಕ್ರಿಯ ಪ್ರಕರಣವಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರಗೆ 8,44,997 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,70,176 ಮಂದಿಯ ವರದಿ ನೆಗೆಟಿವ್ ಬಂದಿದೆ. ಒಟ್ಟು 74,821 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ. ಶನಿವಾರ 574 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಳ್ಳುವುದರೊಂದಿಗೆ ಈವರೆಗೆ ಗುಣಮುಖರಾದವರ ಸಂಖ್ಯೆ 64,575ಕ್ಕೇರಿದೆ.

ಮಾಸ್ಕ್ ನಿಯಮ ಉಲ್ಲಂಘಿಸಿದ 59,771 ಮಂದಿಯಿಂದ 70,57,017 ರೂ. ದಂಡ ವಸೂಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರಿನಲ್ಲಿ 6, ಸುಳ್ಯದಲ್ಲಿ 4, ಬೆಳ್ತಂಗಡಿಯಲ್ಲಿ 1 ಸಹಿತ ದ.ಕ. ಜಿಲ್ಲೆಯಲ್ಲಿ ಶನಿವಾರ 11 ಕಂಟೈನ್ಮೆಂಟ್ ವಲಯಗಳನ್ನು ಘೋಷಿಸಲಾಗಿದೆ.

ಶನಿವಾರ 6,512 ಮಂದಿಗೆ ಲಸಿಕೆ ನೀಡಲಾಗಿದೆ. ರವಿವಾರ ವೆನ್ಲಾಕ್‌ನಲ್ಲಿ ಎರಡನೇ ಡೋಸ್ ಕೋವ್ಯಾಕ್ಸಿನ್ ನೀಡಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉಡುಪಿ 

ಉಡುಪಿ ಜಿಲ್ಲೆಯಲ್ಲಿ ಶನಿವಾರ ಒಟ್ಟು 684 ಮಂದಿ ಕೊರೋನ ಸೋಂಕಿಗೆ ಪಾಸಿಟಿವ್ ಬಂದಿದ್ದು, 848 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 5775 ಸಕ್ರಿಯ  ಪ್ರಕರಣಗಳಿವೆ.

ಶನಿವಾರ  ಮೂವರು ಕೊರೋನ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಕ್ಕೆ ಬಲಿಯಾ ದವರ ಒಟ್ಟು ಸಂಖ್ಯೆ 325ಕ್ಕೇರಿದೆ.

ಇಂದು ಜಿಲ್ಲೆಯಲ್ಲಿ ಮೃತಪಟ್ಟವರು ಮಹಿಳೆಯರಿಬ್ಬರು ಪಂಜಿಮೊಗರು ಶಿರ್ವ ಹಾಗೂ ಕುಂಜಿಬೆಟ್ಟಿನವರಾದರೆ, ವೃದ್ಧರು ಆಲೂರಿನವರು. ಒಬ್ಬರು ನಗರದ ಖಾಸಗಿ, ಒಬ್ಬರು ಜಿಲ್ಲಾಸ್ಪತ್ರೆ ಹಾಗೂ ಮತ್ತೊಬ್ಬರು ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು.

848 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 51,456ಕ್ಕೇರಿದೆ. ನಿನ್ನೆ ಜಿಲ್ಲೆಯ 3611 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 57,556 ಆಗಿದೆ.

ಕಾಸರಗೋಡು 

ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 506 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 860 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 6,813 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, 30,083 ಮಂದಿ ನಿಗಾದಲ್ಲಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 70, 821 ಮಂದಿಗೆ ಸೋಂಕು ದೃಢಪಟ್ಟಿದ್ದು, 63,494 ಮಂದಿ ಗುಣಮುಖರಾಗಿದ್ದಾರೆ