- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಜೂನ್ 7ರ ಬಳಿಕ ಲಾಕ್ಡೌನ್ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದೇನು ಗೊತ್ತಾ ?

yedyurappa [1]ಬೆಂಗಳೂರು : ಕರ್ನಾಟಕದಲ್ಲಿ ಲಾಕ್ಡೌನ್ ಅನ್ನು ಮುಂದುವರೆಸುವ ಬಗ್ಗೆ ಮತ್ತೆ ಚರ್ಚೆಗಳು ನಡೆಯುತ್ತಿದ್ದು, ಲಾಕ್ಡೌನ್ ವಿಸ್ತರಣೆ ಬಗ್ಗೆ ಜೂನ್ 5 ಅಥವಾ 6ರಂದು ನಿರ್ಧಾರ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಕೇಂದ್ರ ಗೃಹ ಇಲಾಖೆ ಕೂಡ ಜೂನ್ 30ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿ ಅಂತ ಸಲಹೆ ಕೊಟ್ಟಿದೆ. ಲಾಕ್ ಡೌನ್ ವಿಸ್ತರಣೆ ಮಾಡೋದು ಜನರ ಮೇಲೆ ನಿಂತಿದೆ. ಕೇಂದ್ರದ ಮಾರ್ಗಸೂಚಿ, ಮತ್ತು ರಾಜ್ಯದ ಸ್ಥಿತಿಗತಿ ನೋಡಿಕೊಂಡು ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಿಎಂ ತೀರ್ಮಾನ ಮಾಡಲಿದ್ದಾರೆ.

ಸಿಎಂ ಯಡಿಯೂರಪ್ಪ, ನಿನ್ನೆ ರಾತ್ರಿ ನೀಡಿದ ಹೇಳಿಕೆಯಲ್ಲಿ ಜನರು ಕೊರೋನಾ ನಿಯಂತ್ರಿಸಲು ಸೂಕ್ತವಾಗಿ ಸಹಕರಿಸಿದರೆ ಜೂನ್ 7ರ ಬಳಿಕ ಲಾಕ್ಡೌನ್ ವಿಸ್ತರಣೆ ಮಾಡುವ ಯೋಚನೆಯಿಲ್ಲ. ಅದರ ಅಗತ್ಯವೂ ಇರುವುದಿಲ್ಲ ಎಂದಿದ್ದರು. ಈ ಬಗ್ಗೆ ಜೂನ್ 6ರ ವೇಳೆಗೆ ಖಚಿತ ಮಾಹಿತಿ ಸಿಗಲಿದೆ.

ತಜ್ಞರ ಜತೆ, ಸಚಿವರ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಇನ್ನೂ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಜಾಸ್ತಿ ಇದೆ. ಲಾಕ್ಡೌನ್ ವಿಸ್ತರಣೆ ಮಾಡಿ ಅಂತ ತಜ್ಞರು ಸದ್ಯ ಯಾವುದೇ ವರದಿ ಕೊಟ್ಟಿಲ್ಲ. ಲಾಕ್ಡೌನ್ ವಿಸ್ತರಣೆ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತಗೊಂಡಿಲ್ಲ. ಕೇಂದ್ರ ಸರ್ಕಾರ ಆಯಾ ರಾಜ್ಯಗಳಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳಲು ಸೂಚಿಸಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಎರಡ್ಮೂರು ದಿನಗಳಲ್ಲಿ ಎರಡನೇ ಹಂತದ ಪ್ಯಾಕೇಜ್ ಘೋಷಣೆ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿರುವ ಸಿಎಂ ಯಡಿಯೂರಪ್ಪ, ಆ ಬಗ್ಗೆ ಸಿದ್ಧತೆಯಾಗುತ್ತಿದೆ ಎಂದಿದ್ದಾರೆ.

ಜೂನ್ 7ರವರೆಗೆ ಬಸ್ ಸಂಚಾರ, ಮೆಟ್ರೋ ಸಂಚಾರ ಸಂಪೂರ್ಣ ಬಂದ್ ಇರಲಿದೆ. ಮಾಲ್, ಚಿತ್ರಮಂದಿರಗಳು, ಪಾರ್ಕ್ಗಳು, ಈಜುಕೊಳಗಳನ್ನು ತೆರೆಯುವಂತಿಲ್ಲ. ಧಾರ್ಮಿಕ ಕಾರ್ಯಗಳಾದ ಜಾತ್ರೆ, ಮಹೋತ್ಸವಗಳು, ದೇವರ ಉತ್ಸವಗಳು, ದೇವಸ್ಥಾನಗಳು, ಧಾರ್ಮಿಕ ಸ್ಥಳಗಳ ಮೇಲಿನ ನಿರ್ಬಂಧ ಮುಂದುವರೆಯಲಿದೆ.

ಈಗ ಬೆಳಗ್ಗೆ 6ರಿಂದ ಬೆಳಗ್ಗೆ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಅನುಮತಿ ನೀಡಿರುವ ಕ್ಷೇತ್ರಗಳ ನೌಕರರು, ವ್ಯಾಕ್ಸಿನ್ ಪಡೆಯುವವರು, ತುರ್ತು ಕಾರಣಗಳಿರುವವರು ಮಾತ್ರ ಸಂಚರಿಸಲು ಅನುಮತಿ ನೀಡಲಾಗಿದೆ.

ಬೆಂಗಳೂರಿನಲ್ಲಿ ಲಾಕ್ ಡೌನ್ ವೇಳೆ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ ನಿನ್ನೆ 1,239 ವಾಹನ ಜಪ್ತಿ ಮಾಡಿದ ಪೊಲೀಸರು ಇಂದು ಕೂಡ ಜಪ್ತಿ ಕಾರ್ಯಚಾರಣೆ ನಡೆಸಿದ್ದಾರೆ. ನಿನ್ನೆ 1044 ದ್ವಿಚಕ್ರ ವಾಹನಗಳು, 82 ಆಟೋಗಳು, 113 ನಾಲ್ಕು ಚಕ್ರದ ವಾಹನಗಳನ್ನು ಸೀಜ್ ಮಾಡಲಾಗಿದೆ. NDMA ಅಡಿಯಲ್ಲಿ 43 ಪ್ರಕರಣ ದಾಖಲು ಮಾಡಲಾಗಿದೆ.