- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಧಾರವಾಡ: ಜಿಲ್ಲೆಯಲ್ಲಿ ಮದ್ಯ ಮಾರಾಟ, ಹೋಟೆಲ್‌ಗಳಲ್ಲಿ ಪಾರ್ಸೆಲ್‌ಗೆ ಗ್ರೀನ್ ಸಿಗ್ನಲ್

Nithish Pateel [1]ಧಾರವಾಡ: ಕೊರೊನಾ ಹತೋಟಿಗೆ ತರುವ ದೃಷ್ಟಿಯಿಂದ ಧಾರವಾಡ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕೆಲವೊಂದಿಷ್ಟು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಿ ಲಾಕ್‌ಡೌನ್ ಜಾರಿ ಮಾಡಿದ್ದಾರೆ. ಆದರೆ ಈಗ ಅದರಲ್ಲಿ ಕೆಲವೊಂದಿಷ್ಟು ಬದಲಾವಣೆಗಳನ್ನು ತಂದಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಮದ್ಯ ಮಾರಾಟ ಹಾಗೂ ಹೋಟೆಲ್‌ಗಳಲ್ಲಿ ಪಾರ್ಸೆಲ್ ಸೇವೆಯನ್ನೂ ರದ್ದುಗೊಳಿಸಿದ್ದ ಜಿಲ್ಲಾಧಿಕಾರಿಗಳು, ಜೂ.1ರಿಂದ 6 ರವರೆಗೆ ಮದ್ಯ ಮಾರಾಟ ಹಾಗೂ ಹೋಟೆಲ್‌ಗಳಲ್ಲಿ ಪಾರ್ಸೆಲ್ ಸೇವೆಗೆ ಅನುಮತಿ ನೀಡಿದ್ದಾರೆ.

ಜೂ.1ರಿಂದ 6 ರವರೆಗೆ ಬೆಳಿಗ್ಗೆ 6 ರಿಂದ ಬೆಳಿಗ್ಗೆ 8 ಗಂಟೆಯ ಅವಧಿಯಲ್ಲಿ ಮದ್ಯ ಮಾರಾಟ ಹಾಗೂ ಹೋಟೆಲ್‌ಗಳಲ್ಲಿ ಪಾರ್ಸೆಲ್ ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪರಿಷ್ಕೃತ ಆದೇಶದಲ್ಲಿ ತಿಳಿಸಿದ್ದಾರೆ.