ಮಂಗಳೂರು : ಪೊಲೀಸರು ಬಂಧಿಸಿದ್ದ ಕಳ್ಳನೊಬ್ಬ ಕಳ್ಳತನ ಮಾಡಿದ ಚಿನ್ನದ ಉಂಗುರಗಳನ್ನೇ ನುಂಗಿ ದ ಘಟನೆ ಸುಳ್ಯದಲ್ಲಿ ನಡೆದಿದೆ.
ಕೇರಳದ ತ್ರಿಶೂರ್ ಜಿಲ್ಲೆಯ ಶಿಬು ಎಂಬಾತ ಸುಳ್ಯ, ಪುತ್ತೂರಿನಲ್ಲಿ ಕಳ್ಳತನ ಮಾಡಿದ ಚಿನ್ನ ನುಂಗಿ ತೀವ್ರ ಹೊಟ್ಟೆ ನೋವಿನಿಂದ ನೋವಿಗೆ ಒಳಗಾಗಿದ್ದು, ಕೂಡಲೇ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ವೈದ್ಯರು ಎಕ್ಸ್ ರೇ ಪರೀಕ್ಷೆಗೆ ಒಳಪಡಿಸಿದಾಗ ಹೊಟ್ಟೆಯಲ್ಲಿ ಚಿನ್ನದ ಉಂಗುರ ಇರುವುದು ಪತ್ತೆಯಾಗಿದೆ. ಹೊಟ್ಟೆಯಿಂದ 35 ಗ್ರಾಂ ತೂಕದ ಉಂಗುರಗಳನ್ನು ವೈದ್ಯರು ಹೊರ ತೆಗೆದಿದ್ದು,ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಳಿಕ ಶಿಬುವನ್ನು ವಿಚಾರಣೆ ನಡೆಸಿದಾಗ ಪೊಲೀಸರ ಕೈಗೆ ಸಿಕ್ಕಿಬೀಳುವುದನ್ನು ತಪ್ಪಿಸಲೆಂದು ಚಿನ್ನದ ಉಂಗುರಗಳನ್ನು ಐಸ್ ಕ್ರೀಂ ಜೊತೆಗೆ ಸೇರಿಸಿ ನುಂಗಿದ್ದಾಗಿ ಒಪ್ಪಿಕೊಂಡಿದ್ದಾನೆ. ಸದ್ಯ ಆರೋಪಿಯ ಆರೋಗ್ಯ ಸ್ಥಿತಿ ಚೆನ್ನಾಗಿದ್ದು,ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ.
Click this button or press Ctrl+G to toggle between Kannada and English