ಮಂಗಳೂರು : ಲಾಕ್ ಡೌನ್ ಸಂದರ್ಭದಲ್ಲಿ ಗ್ರಾಹಕ ರಿಂದ ಕೆಲವೊಂದು ದಿನಸಿ ಸಾಮಾಗ್ರಿಗಳು, ತರಕಾರಿ, ಹಣ್ಣು ಹಂಪಲುಗಳ ವರ್ತಕರು ಸಿಕ್ಕಿದ್ದೇ ಲಾಭ ಎಂಬಂತೆ ಮನ ಬಂದಂತೆ ಹಣ ವಸೂಲಿ ಮಾಡುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ದೂರು ನೀಡಿರುವುದರಿಂದ, ಅಂತಹ ವರ್ತಕರನ್ನು ಪತ್ತೆ ಹಚ್ಚಲು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.
ಜಿಲ್ಲೆಯಲ್ಲಿ ಕೋವಿಡ್19 ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸುವ ಸಲುವಾಗಿ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದ ವತಿಯಿಂದ ಕಾಲಕಾಲಕ್ಕೆ ಎಲ್ಲಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಲಾಕ್‍ಡೌನ್‍ನ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ.
ಈ ಸಂದರ್ಭದಲ್ಲಿ ಸ್ಥಳೀಯ ಮಾರುಕಟ್ಟೆಗಳಲ್ಲಿ ದಿನಸಿ ಸಾಮಾಗ್ರಿಗಳು, ತರಕಾರಿ, ಹಣ್ಣು ಹಂಪಲುಗಳನ್ನು ಎ.ಪಿ.ಎಂ. ಎಪಿಎಂಸಿ ಅಥವಾ ಹಾಪ್ ಕಾಮ್ಸ್ ನಿಗದಿತ ದರಕ್ಕಿಂತ ಹೆಚ್ಚಿನ ದರವನ್ನು ವಿಧಿಸಿ ಮಾರಾಟ ಅಥವಾ ಹಾಪ್ ಕಾಮ್ಸ್ ನಿಗದಿತ ದರಕ್ಕಿಂತ ಹೆಚ್ಚಿನ ದರವನ್ನು ವಿಧಿಸಿ ಮಾರಾಟ ಮಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು ಈ ವಿಚಾರದಲ್ಲಿ ಸಾರ್ವಜನಿಕರಿಂದ ದೂರು ಅಹವಾಲುಗಳು ಬಂದಲ್ಲಿ, ಅವುಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸೀತಾ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಪ್ರವೀಣ್, ಮಂಗಳೂರು ಎಪಿಎಂಸಿ ಕಾರ್ಯದರ್ಶಿ ರಾಣಿ ಇವರುಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ.
ಸಾರ್ವಜನಿಕರುಗಳು ನಿಮ್ಮ ದೂರು ಅಥವಾ ಅಹವಾಲುಗಳನ್ನು ಜಿಲ್ಲಾಧಿಕಾರಿ ಕಚೇರಿಯ ಕಂಟ್ರೋಲ್ ರೂಂ. ಮೊ.ನಂ. 9483908000 ಗೆ ವಾಟ್ಸ್ ಆ್ಯಪ್ ಮೂಲಕ ಕಳುಹಿಸಿ ಜಿಲ್ಲಾಡಳಿತದ ಗಮನಕ್ಕೆ ತರಬಹುದಾಗಿದೆ. ನೋಡಲ್ ಅಧಿಕಾರಿಗಳು ಸಾರ್ವಜನಿಕರಿಂದ ಸ್ವೀಕೃತವಾಗುವ ದೂರುಗಳಿಗೆ ತಕ್ಷಣವೇ ಸ್ಪಂದಿಸಿ. ಸ್ಥಳೀಯ ಮಾರುಕಟ್ಟೆಗಳಲ್ಲಿ ದಿನಸಿ ಸಾಮಾಗ್ರಿಗಳು ತರಕಾರಿ, ಹಣ್ಣುಹಂಪಲು ಎಪಿಎಂಸಿ/ಹಾಪ್ ಕಾಪ್ಸ್ ನಿಗದಿತ ದರಕ್ಕಿಂತ ಹೆಚ್ಚಿನ ಮಾರಾಟವಾಗದಂತೆ ಕ್ರಮ ವಹಿಸಿ ಯಾವುದೇ ಗೊಂದಲಗಳುಂಟಾಗದಂತೆ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ನೀಡಲು ಕ್ರಮವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಾಹಣಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
Click this button or press Ctrl+G to toggle between Kannada and English