ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಮೂಲದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಆರೋಗ್ಯದಲ್ಲಿ ದಿಢೀರ್ ಏರುಪೇರುಗೊಂಡ ಬೆಂಗಳೂರಿನಲ್ಲಿ ಮೃತರಾದರು.
ಮಂಗಳೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಯಾಗಿರುವ ಕಡಬ ತಾಲೂಕಿನ ಐನೆಕಿದು ಗ್ರಾಮದ ಕೂಜುಗೋಡು ಕಟ್ಟೆಮನೆ ಮನೆತನದ ಬೆಂಗಳೂರಿನ ಉದ್ಯಮಿ ದಿನೇಶ್ ಕೆ. ಅವರ ಪುತ್ರಿ ಪ್ರತೀಕ್ಷಾ(21) ಬೆಂಗಳೂರಿನಲ್ಲಿ ನಿಧನರಾದರು.
ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದ ಪ್ರತೀಕ್ಷಾ ಬೆಂಗಳೂರಿನ ಮನೆಗೆ ಹೋಗಿದ್ದರು. ರಕ್ತದೊತ್ತಡ ಕುಸಿತಕ್ಕೊಳಗಾಗಿ ಅಸೌಖ್ಯಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ರಾತ್ರಿ ನಿಧನರಾದರು. ಅವರು ತಂದೆ, ತಾಯಿ, ಸಹೋದರಿ ಹಾಗೂ ಸಹೋದರನನ್ನು ಅಗಲಿದ್ದಾರೆ.
Click this button or press Ctrl+G to toggle between Kannada and English