ಸಿಬಿಎಸ್ಇ (CBSC)12ನೇ ಪರೀಕ್ಷೆಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ

8:53 PM, Tuesday, June 1st, 2021
Share
1 Star2 Stars3 Stars4 Stars5 Stars
(5 rating, 1 votes)
Loading...

cbscನವದೆಹಲಿ : ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಸಿಬಿಎಸ್ಇ 12ನೇ ಪರೀಕ್ಷೆಯನ್ನುರದ್ದುಗೊಳಿಸಿದೆ.  ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ.

ಕೋವಿಡ್ ಪರಿಸ್ಥಿತಿ ಹಿನ್ನಲೆ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. ನಮ್ಮ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆ ಅತ್ಯಂತ ಮಹತ್ವದ್ದಾಗಿದೆ ಮತ್ತು ಈ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಪ್ರಧಾನಿ ಹೇಳಿದ್ದಾರೆ.

ಸಿಬಿಎಸ್‌ಇ ಫಲಿತಾಂಶಗಳನ್ನು ಘೋಷಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಭೆಯ ಬಳಿಕ ಸ್ಪಷ್ಟಪಡಿಸಲಾಗಿದೆ. ಕಳೆದ ವರ್ಷದ ಮಾದರಿಯಲ್ಲಿ ಯಾವುದೇ ವಿದ್ಯಾರ್ಥಿ ಪರೀಕ್ಷೆ ತೆಗೆದುಕೊಳ್ಳಲು ಬಯಸಿದರೆ ಆ ಆಯ್ಕೆಯನ್ನು ಸಹ ನೀಡಲಾಗುತ್ತದೆ. ಪರೀಕ್ಷೆಯನ್ನು ಯಾವಾಗ ನಡೆಸಲಾಗುತ್ತದೆ ಎಂದು ಬಳಿಕ ಮಾಹಿತಿ ತಿಳಿಸಲಾಗುತ್ತದೆ.

ಹಲವು ರಾಜ್ಯಗಳು ಕೋವಿಡ್ ಪರಿಸ್ಥಿತಿ ಸುಧಾರಿಸಿದ ಬಳಿಕ ಆಗಸ್ಟ್‌ನಲ್ಲಿ ಕಿರು ಪರೀಕ್ಷೆಗಳನ್ನು ನಡೆಸುವ ಕುರಿತು ಸಹ ಪ್ರಸ್ತಾವನೆ ಮುಂದಿಟ್ಟಿದ್ದವು. ವಿದ್ಯಾರ್ಥಿಗಳ ಸುರಕ್ಷತೆ ಮೊದಲ ಆದ್ಯತೆಯಾಗಿದೆ ಎಂದು ಕೇಂದ್ರ ಶಿಕ್ಷಣ ಇಲಾಖೆ ಹೇಳಿತ್ತು.

ಭಾನುವಾರ ನಡೆದ ಸಭೆಯ ವೇಳೆ ಸಿಬಿಎಸ್‌ಇ ಎರಡು ಆಯ್ಕೆಗಳನ್ನು ರಾಜ್ಯಗಳ ಮುಂದೆ ಇಟ್ಟಿತ್ತು. ಆದರೆ ಮಂಗಳವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪರೀಕ್ಷೆಗಳನ್ನು ರದ್ದುಗೊಳಿಸಿ ಆದೇಶವನ್ನು ಹೊರಡಿಸಲಾಗಿದೆ.

ಸಿಬಿಎಸ್‌ಇ ಮತ್ತು ಸಿಐಎಸ್‌ಸಿಯ ಬಾಕಿ ಉಳಿದಿರುವ ಪರೀಕ್ಷೆಗಳನ್ನು ಜೂನ್ ತಿಂಗಳಿನಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು. ಈ ಎರಡೂ ಮಂಡಳಿಗಳು ಹಿಂದೆ 10ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದವು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English