ಬೆಂಗಳೂರು : ಕರ್ನಾಟಕದಲ್ಲಿ ಇನ್ನೂ ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಲಾಕ್ಡೌನ್ ವಿಸ್ತರಣೆ ಮಾಡಿ ಬಿಗಿ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ಸಂಬಂಧ ಇಂದು ಸಂಜೆ ಸಚಿವರ ಜೊತೆ ಉನ್ನತ ಮಟ್ಟದ ಚರ್ಚೆ ನಡೆಸಿ, ಅಲ್ಲಿ ಅವರ ಸಲಹೆಗಳನ್ನು ಪಡೆದು ಮತ್ತಷ್ಟು ಕಠಿಣ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ರಾಜ್ಯದಲ್ಲಿ ಇನ್ನೂ ಕೊರೋನಾ ಕೇಸುಗಳು ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ, ಲಾಕ್ಡೌನ್ ಮುಂದುವರಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.
ಲಾಕ್ಡೌನ್ನಿಂದಾಗಿ ಕೂಲಿ-ಕಾರ್ಮಿಕರಿಗೆ, ಅನೇಕ ಸಮುದಾಯಗಳಿಗೆ ತೊಂದರೆ ಉಂಟಾಗಿದ್ದು, ಮುಂದಿನ 2-3 ದಿನಗಳಲ್ಲಿ ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡುವುದಾಗಿ ಅವರು ತಿಳಿಸಿದ್ದಾರೆ.
ಲಾಕ್ಡೌನ್ನಲ್ಲಿ ಕೆಲವೊಂದಕ್ಕೆ ಮಾತ್ರ ವಿನಾಯ್ತಿ ಕೊಡುವ ಬಗ್ಗೆ ಸಂಜೆ ಚರ್ಚೆ ಮಾಡುತ್ತೇವೆ. ಲಾಕ್ಡೌನ್ ಸಡಿಲ ಹೇಗೆ ಮಾಡಬೇಕು ಎಂಬ ಬಗ್ಗೆಯೂ ಚರ್ಚೆ ಮಾಡುತ್ತೇವೆ. ಜೂನ್ 7ರ ನಂತರವೂ ಲಾಕ್ಡೌನ್ ವಿಸ್ತರಣೆಗೆ ನಿರ್ಧರಿಸಲಾಗಿದೆ ಎಂದರು.
ಹಳ್ಳಿಗಳಲ್ಲಿ ಇನ್ನೂ ಕೊರೊನಾ ಕಡಿಮೆ ಆಗಿಲ್ಲ. ಸದ್ಯಕ್ಕೆ ಕೊರೋನಾ ನಿಯಂತ್ರಿಸುವುದು ಮಾತ್ರ ನಮ್ಮ ಸರ್ಕಾರದ ಮುಂದಿರುವ ಗುರಿಯಾಗಿದೆ ಹೀಗಾಗಿ, ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಹೇಳಿದ್ದಾರೆ.
ರಫ್ತಿಗೆ ಸಂಬಂಧಿಸಿದ ಕೆಲಸಗಳು ನಾಳೆಯಿಂದಲೇ ಆರಂಭವಾಗಲಿವೆ. ಕೈಗಾರಿಕೆಗಳಿಗೆ ಸಂಬಂಧಿಸಿದ ಕೆಲವು ವಲಯಗಳಿಗೆ ಲಾಕ್ಡೌನ್ನಿಂದ ವಿನಾಯಿತಿ ನೀಡಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯದ ಪಾಸಿಟಿವಿಟಿ ದರ ಇನ್ನೂ ಶೇಕಡಾ 13.57ರಷ್ಟಿದೆ. ಕೊರೋನಾ ಸೋಂಕನ್ನು ನಿಯಂತ್ರಿಸಲು ಇವರು ಏಕೈಕ ಮಾರ್ಗ ಲಾಕ್ಡೌನ್ ಮಾತ್ರ. ಹೀಗಾಗಿ ಲಾಕ್ಡೌನ್ ಅನ್ನು ಕಟ್ಟು ನಿಟ್ಟಾಗಿ ಜಾರಿಗೆ ತನ್ನಿ ಎಂದು ತಜ್ಞರು ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ಅಲ್ಲದೆ, ಜೂನ್ ಕೊನೆಯವರೆಗೆ ಲಾಕ್ಡೌನ್ ಇದ್ದರೆ ಒಳ್ಳೆಯದು ಎಂದಿದ್ದರು. ಹೀಗಾಗಿ, ಸರ್ಕಾರ ಲಾಕ್ಡೌನ್ ವಿಸ್ತರಿಸಲು ಮುಂದಾಗಿದೆ.
Click this button or press Ctrl+G to toggle between Kannada and English