ಬೆಂಗಳೂರು: ಕೋವಿಡ್-19 ಸಂಕಷ್ಟದಲ್ಲಿರುವ 150 ಕ್ಕೂ ಹೆಚ್ಚು ಮಂಗಳ ಮುಖಿಯರಿಗೆ ದಿನಸಿ ಸಾಮಾಗ್ರಿಗಳ ಪಡಿತರ ಕಿಟ್ ಹಾಗೂ ಮೆಡಿಕಲ್ ಕಿಟ್‍ಗಳನ್ನು ಅಗರವಾಲ್ ಸಮಾಜ (ಕರ್ನಾಟಕ)ದ ಬೆಂಗಳೂರು ಪ್ರೆಸ್‍ಕ್ಲಬ್‍ನಲ್ಲಿಂದು ಅಧ್ಯಕ್ಷ ಸಂಜಯ್ ಗರ್ಗ್ ವಿತರಿಸಿದರು.
ಪೋಟೊ ಜರ್ನಲಿಸ್ಟ್ ಅಸೋಸಿಯೇಷಯನ್ ಆಫ್ ಬೆಂಗಳೂರು ಮತ್ತು ಅಗರವಾಲ್ ಸಮಾಜ (ಕರ್ನಾಟಕ) ಜಂಟಿಯಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಪ್ರಾಸ್ತವಾಕವಾಗಿ, ಸಂಜಯ್ ಗರ್ಗ್ ಮಂಗಳಮುಖಿಯರಿಗೆ ಪಡಿತರ ಕಿಟ್ ನೀಡುತ್ತಿರುವುದು ನಮಗೆ ಸಂತಸ ಉಂಟುಮಾಡಿದೆ. ಸಮಾಜದಿಂದ ನಿರ್ಲಕ್ಷ್ಯಕ್ಕೆ ಒಳಗಾಗದ ಈ ವರ್ಗದವರ ಬಗ್ಗೆ ಕಾಳಜಿ ಹೊಂದಿರುವ ಬೆಂಗಳೂರು ಛಾಯಾಚಿತ್ರ ಸಂಸ್ಥೆ ಅವರ ಮುಂದಾಳತ್ವ ಪ್ರಶಂಸನೀಯ ಎಂದು ಅವರು ಹೇಳಿದರು.
ಕೊರೊನಾ ವಾರಿಯರ್ಸ್ ಆಗಿ, ಕೊರೊನಾ ಜಾಗೃತಿ ಮೂಡಿಸುವಲ್ಲಿ ಇವರ ಕಾರ್ಯ ಶ್ಲಾಘನೀಯ. ಇವರ ಆರೋಗ್ಯದ ಬಗ್ಗೆಯೂ ಹೆಚ್ಚು ಕಾಳಜಿ ವಹಿಸುವಂತೆ ಅವರು ಸಲಹೆ ಮನವಿ ಮಾಡಿಕೊಂಡರು.
ಪೋಟೊ ಜರ್ನಲಿಸ್ಟ್ ಅಸೋಸಿಯೇಷಯನ್ ಅಧ್ಯಕ್ಷ ಬಿ.ಎನ್. ಮೋಹನ್ ಕುಮಾರ್ ಮಾತನಾಡಿ ಕೊರೊನಾ ಸಂದರ್ಭದಲ್ಲಿ ಅಗರವಾಲ್ ಸಮಾಜ ಹೆಚ್ಚು ಹೆಚ್ಚು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ. ನಮ್ಮ ಸಂಘದ ಕೈಜೋಡಿಸಿ ಪಡಿತರ ಕಿಟ್ ನೀಡುತ್ತಿರುವುದು ನಮಗೆ ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.
ಅಗರವಾಲ್ ಸಮಾಜ (ಕರ್ನಾಟಕ) ಕಾರ್ಯದರ್ಶಿ ವಿಜಯ್ ಸರಫ್, ಜಂಟಿ ಕಾರ್ಯದರ್ಶಿ ಸಂಜಯ್ ಮೊಹತ್, ಪೋಟೊ ಜರ್ನಲಿಸ್ಟ್ ಅಸೋಸಿಯೇಷಯನ್ ಆಫ್ ಬೆಂಗಳೂರು ಅಧ್ಯಕ್ಷರಾದ ಬಿ.ಎನ್. ಮೋಹನ್ ಕುಮಾರ್, ಉಪಾಧ್ಯಕ್ಷ ಶೈಲೆಂದ್ರ ಭೋಜಕ್, ಕಾರ್ಯದರ್ಶಿ ಗಣೇಶ್ ಕೆ.ಎಸ್. ಉಪಸ್ಥಿತಿರಿದ್ದರು.
ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್ ಬ್ಯುರೋ.
Click this button or press Ctrl+G to toggle between Kannada and English