ಬೆಳ್ತಂಗಡಿ : ಇತ್ತೀಚೆಗಷ್ಟೇ ವಿವಾಹವಾಗಿದ್ದ ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದ ಅರಣ್ಯ ವೀಕ್ಷಕರೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೂ.3ರಂದು ಕಳಿಯ ಗ್ರಾಮದ ಗೇರುಕಟ್ಟೆ ಪಲ್ಲಿದಳಿಕೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದ ಅರಣ್ಯ ವೀಕ್ಷಕ ಬಾಲಕೃಷ್ಣ ಗೌಡ (40) ಆತ್ಮಹತ್ಯೆ ಮಾಡಿಕೊಂಡವರು.
ಬಾಲಕೃಷ್ಣರ ಮೃತದೇಹ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮನೆಯ ಸಮೀಪ ಗುಡ್ಡದಲ್ಲಿ ಗುರುವಾರ ಬೆಳಗ್ಗೆ ಪತ್ತೆಯಾಗಿದೆ.
ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.
Click this button or press Ctrl+G to toggle between Kannada and English