ಕರ್ನಾಟಕದಲ್ಲಿ ಜೂನ್ 14 ರ ವರೆಗೆ ಲಾಕ್ ಡೌನ್ ಮುಂದುವರಿಕೆ

7:17 PM, Thursday, June 3rd, 2021
Share
1 Star2 Stars3 Stars4 Stars5 Stars
(5 rating, 1 votes)
Loading...

bs Yedyurappa ಬೆಂಗಳೂರು:  ರಾಜ್ಯದಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ಮುಂದೂಡಲ್ಪಟ್ಟಿದ್ದು ಜೂನ್ 14 ರ ಬೆಳಿಗ್ಗೆ 6 ವರೆಗೆ ಈಗ ಇರುವ ನಿಯಮಗಳು ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಲಾಕ್ ಡೌನ್ ವಿಸ್ತರಣೆ ಬಗ್ಗೆ ಜೂನ್ 03 ರಂದು ಸಂಜೆ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕೊರೋನಾ ನಿಯಂತ್ರಣಕ್ಕಾಗಿ ವಿಧಿಸಲಾಗಿಸಲಾಗಿರುವ ನಿಯಮಗಳಲ್ಲಿ ಸದ್ಯಕ್ಕೆ ಯಾವುದೇ ಸಡಿಲಿಕೆ, ಬದಲಾವಣೆಗಳೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹೋಟೆಲ್  ಗಳಿಂದ ಪಾರ್ಸಲ್ ಪಡೆಯುವುದಕ್ಕೆ, ರಫ್ತು ಮಾಡುವುದಕ್ಕೆ ಅಗತ್ಯವಿರುವ ಚಟುವಟಿಕೆಗಳಿಗೆ ನಿರ್ಬಂಧವನ್ನು ಸಡಿಲಿಸಲಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ 2ನೇ ಅಲೆ ಕೋವಿಡ್ ಹಿನ್ನೆಲೆಯಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಮಾಡಿದ್ದು ಇದರಿಂದ ಬಾಧಿತವಾದ ಸಮಾಜದ ವಿವಿಧ ವರ್ಗಗಳಿಗೆ ಈಗಾಗಲೇ ಪರಿಹಾರದ ಪ್ಯಾಕೇಜ್‍ನ್ನು ಘೋಷಣೆ ಮಾಡುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English