ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಂಗಳೂರು ನಗರದಲ್ಲಿ ಮಳೆ ವಿಕೋಪ ತಡೆಯಲು ಕೈಗೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಿ 209 ಸೂಕ್ಷ್ಮ, ಅತಿ ಸೂಕ್ಷ್ಮ ಸ್ಥಳಗಳಲ್ಲಿ ಶಾಶ್ವತ ಪರಿಹಾರ ರೂಪಿಸಲು ನಿರ್ದೇಶನ ನೀಡಿದರು.
ಎಂಡು ವಲಯಗಳಲ್ಲಿ ಶಾಶ್ವತ ನಿಯಂತ್ರಣ ಕೊಠಡಿಗಳಿದ್ದು, 63 ತಾತ್ಕಾಲಿಕ ನಿಯಣತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ದಿನದ 24 ಗಂಟೆಯೂ ಈ ನಿಯತ್ರಣ ಕೊಠಡಿಗಳು ಕಾರ್ಯ ನಿರ್ವಹಿಸಲಿದ್ದು, ಅನ್ – ಸ್ಕಿಲ್ಡ್ ಕೂಲಿಗಳು, ಮೇಲ್ವಿಚಾರಕರು ಮತ್ತು ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆಗೆ ಅಗತ್ಯ ಸಲಕರಣೆಗಳನ್ನು ಸಂಗ್ರಹಿಸಲು ಕ್ರಮ ವಹಿಸಲು ತಿಳಿಸಿದರು.
ರಸ್ತೆ ಬದಿ ಮಳೆ ನೀರು ಚರಂಡಿಗಳ ಹೂಳು ತೆರವುಗೊಳಿಸುವುದು, ಅಡ್ಡ ಮೋರಿಗಳ ಹೂಳು ತೆಗೆಯುವುದರೊಂದಿಗೆ ರಾಜ ಕಾಲುವೆಗಳನ್ನು ಸಂಪರ್ಕಿಸುವ ಚರಂಡಿಗಳನ್ನು ಗುರುತಿಸಿ ಸುಸ್ಥತಿಯಲ್ಲಿಡಲು ಕ್ರಮ ವಹಿಸಲು ತಿಳಿಸಿದರು.
ದೊಡ್ಡ ಕಾಲುವೆಗಳಲ್ಲಿ 26 ವಾಟರ್ ಲೆವೆಲ್ ಸೆನ್ಸಾರ್‍ಗಳನ್ನು ಅಳವಡಿಸಲಾಗಿದೆ, ಬೆಂಗಳೂರು ಮೇಘ ಸಂದೇಶ ಆಫ್‍ನಲ್ಲಿ ಮಳೆಯ ಪ್ರಮಾಣದ ಮಾಹಿತಿ ಲಭ್ಯವಾಗುತ್ತದೆ. ನೀರು ಸಂಗ್ರಹವಾಗಿರುವ ಸ್ಥಳಗಳು, ಜನರಿಗೆ ಸುರಕ್ಷಿತ ಮಾರ್ಗ ಬಳಕೆಯ ಕುರಿತು ಮಾಹಿತಿ ನೀಡುತ್ತದೆ.
209 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸ್ಥಳಗಳನ್ನು ಗುರುತಿಸಲಾಗಿದೆ (58 ಅತಿ ಸೂಕ್ಷ್ಮ 151 ಸೂಕ್ಷ್ಮ ಪ್ರದೇಶ) ಈ ಪ್ರದೇಶಗಳಲ್ಲಿ ನೀರಿನ ಪ್ರವಾಹ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ರೂಪಿಸುವಂತೆ ಸೂಚಿಸಿದರು.
ನಗರದಲ್ಲಿ ತಡೆಗೋಡೆ ಇರುವ 40 ಕಿ.ಮೀ ಉದ್ದದ ರಾಜಕಾಲುವೆ ಪ್ರದೇಶಗಳ ವಾರ್ಷಿಕ ನಿರ್ವಹಣೆಗೆ ಕ್ರಮವಹಿಸಲು ಹಾಗೂ ಕೆರೆಗಳನ್ನು ದೈನಂದಿನ ಆಧಾರದಲ್ಲಿ ನಿರ್ವಹಿಸಲಾಗುತ್ತಿದ್ದು, ಮಳೆ ನೀರು ರಾಜ ಕಾಲುವೆಗಳ ಮೂಲಕ ಕೆರೆಗಳಿಗೆ ಹರಿಯುವಂತೆ ಮಾಡುವುದರಿಂದ ಪ್ರವಾಹ ತಪ್ಪಿಸಬಹುದು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಾ|| ಸಿ.ಎನ್. ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್. ಅಶೋಕ್, ವಸತಿ ಸಚಿವ ವಿ. ಸೋಮಣ್ಣ, ಅರಣ್ಯ ಮತ್ತು ಕನ್ನಡ ಸಂಸ್ಕøತಿ ಸಚಿವ ಅರವಿಂದ ಲಿಂಬಾವಳಿ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ, ಅಬಕಾರಿ ಸಚಿವ ಗೋಪಾಲಯ್ಯ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ|| ಇ.ವಿ. ರಮಣರೆಡ್ಡಿ, ಬಿಬಿಎಂಪಿ ಆಡಳಿತಾಧಿಕಾರಿ ಹಾಗೂ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವಗುಪ್ತಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್ ಬ್ಯುರೋ.
Click this button or press Ctrl+G to toggle between Kannada and English