ಹಚ್ಚಹಸಿರು ಕ್ಯಾಂಪಸ್ : ವಿಶಿಷ್ಟ ರೀತಿಯಲ್ಲಿ ವಿಶ್ವ ಪರಿಸರ ದಿನದ ಆಚರಣೆ

4:47 PM, Friday, June 4th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

World Environmentಗದಗ : ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಹಾಗೂ ಜಿಲ್ಲಾ ಅರಣ್ಯ ಇಲಾಖೆ ಇವರ ಸಹಯೋಗದೊಂದಿಗೆ ಪ್ರತಿ ವರ್ಷ ಜೂನ್ 05 ರಂದು ಆಚರಿಸಲಾಗುವ ವಿಶ್ವ ಪರಿಸರ ದಿನದ ಈ ಸುಸಂದರ್ಭದಲ್ಲಿ ಹಚ್ಚಹಸಿರು ಕ್ಯಾಂಪಸ್ ನಿರ್ಮಿಸುವ ನಿಟ್ಟಿನಲ್ಲಿ ನಾಗಾವಿ ಹತ್ತಿರದ ಗುಡ್ಡಬೆಟ್ಟಗಳ ನಯನ ಮನೋಹರ ತಾಣದಲ್ಲಿ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಅನ್ನು ಹಚ್ಚಹಸಿರು ಕ್ಯಾಂಪಸ ಆಗಿ ನಿರ್ಮಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಈ ನೂತನ ಕ್ಯಾಂಪಸ್ನ ಸಬರಮತಿ ಆಶ್ರಮ, ಸ್ಮೃತಿವನ, ಜೀವ ವೈವಿಧ್ಯ ವನ, ಸಸ್ಯ ಶಿಶುಪಾಲನಾ ಕೇಂದ್ರ, ದೇಸಿ ಯೋಜನೆ ಒಳಗೊಂಡು ಹತ್ತು ವಿವಿಧ ಸ್ಥಾನಗಳಲ್ಲಿ 100ಕ್ಕೂ ಅಧಿಕ ಪ್ರಾಧ್ಯಾಪಕರು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿಯವರು ಸೇರಿ ಏಕಕಾಲದಲ್ಲಿ 500 ಗಿಡಗಳನ್ನು ನೆಟ್ಟು ಬೆಳೆಸುವ ಯೋಜನೆಯನ್ನು ನಾಳೆ ದಿನಾಂಕ 05.06.2021 ರಂದು ಅನುಷ್ಠಾನಗೊಳಿಸಲಾಗುವುದು.

ವಿಶ್ವವಿದ್ಯಾಲಯದಲ್ಲಿ ಪ್ರಸ್ತುತ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಕೋವಿಡ್-19 ಕಾರಣದಿಂದಾಗಿ ಅವರು ತಮ್ಮ ಮನೆಗಳಲ್ಲಿ ವಾಸವಾಗಿರುತ್ತಾರೆ. ವಿದ್ಯಾರ್ಥಿಗಳಿಗೆ ಈ ಸತ್ಕಾರ್ಯದಲ್ಲಿ ಭಾಗಿಯಾಗಲು ಪ್ರಯಾಣ ಮಾಡುವುದು ಕಷ್ಟ ಸಾಧ್ಯವಾಗಿದ್ದರಿಂದ ವಿಶ್ವವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳು ಅವರು ತಮ್ಮ-ತಮ್ಮ ಸ್ಥಾನಗಳಲ್ಲಿ ಕನಿಷ್ಠ ಒಂದು ಸಸಿಯನ್ನು ನೆಟ್ಟು, ಸೆಲ್ಫಿ ತೆಗೆದು ವಿಶ್ವವಿದ್ಯಾಲಯದೊಂದಿಗೆ ಹಂಚಿಕೊಳ್ಳುವ ನನ್ನ ಗಿಡ ನನ್ನ ಉಸಿರು ಎಂಬ ವಿನೂತನವಾದ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಮೂಲಕ ಈ ವರ್ಷದ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಹಾಗೂ ಅತಿ ವಿಶಿಷ್ಟವಾಗಿ ಆಚರಿಸಲಾಗುವುದು ಹಾಗೂ ವಿಶ್ವವಿದ್ಯಾಲಯವು ಗದಗ ಜಿಲ್ಲೆಯಲ್ಲಿ ವಿಶೇಷ ಅಗತ್ಯವುಳ್ಳ 20 ಶಾಲೆಗಳನ್ನು ದತ್ತು ಪಡೆದುಕೊಂಡಿರುತ್ತದೆ. ಈ ಶಾಲೆಗಳ ಪೈಕಿ ಪ್ರಸ್ತುತ 2 ಶಾಲೆಗಳಲ್ಲಿ ಔಷಧ ವನವನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ. ಬಸವರಾಜ ಎಲ್. ಲಕ್ಕಣ್ಣವರ್ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಪಂಚವಟಿ ಅಭಿಯಾನ (ಆಕ್ಸಿಜನ್ ಟವರ್)
ಪಂಚವಟಿ ವನವು ಅತಿ ಹೆಚ್ಚು ಆಮ್ಲಜನಕವನ್ನು ಬಿಡುಗಡೆ ಮಾಡುವಂತ ಗಿಡಗಳಾದ ಅತ್ತಿ, ಬನ್ನಿ, ಬೇವು, ಅರಳಿ, ಪತ್ರಿ ಗಳನ್ನೊಳಗೊಂಡಿರುತ್ತದೆ. ಈ ಅಭಿಯಾನವನ್ನು ವಿಶ್ವವಿದ್ಯಾಲಯದ ಸಿಬ್ಬಂದಿಗಳ ಸಹಕಾರದೊಂದಿಗೆ ಸುತ್ತಮುತ್ತಲಿನ ಪ್ರತಿಯೊಂದು ಗ್ರಾಮಗಳಲ್ಲಿ ಅನುಷ್ಠಾನಗೊಳಿಸುವ ಮಹತ್ವಾಕಾಂಕ್ಷೆಯನ್ನು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ವಿಷ್ಣುಕಾಂತ ಎಸ್. ಚಟಪಲ್ಲಿ ರವರು ಹೊಂದಿದ್ದಾರೆ.

ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್‌ ಬ್ಯುರೋ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English