ಚೀನಾದಿಂದ ರಾಜ್ಯದ ರೈತರಿಗೆ ಅಪಾಯಕಾರಿ ಬೀಜ ಪಾರ್ಸಲ್

5:07 PM, Friday, June 4th, 2021
Share
1 Star2 Stars3 Stars4 Stars5 Stars
(No Ratings Yet)
Loading...

chaina-seedಗದಗ : ಚೀನಾ ದೇಶದಿಂದ ಬೀಜಗಳನ್ನು ಬೇರೆ ಬೇರೆ ದೇಶಗಳಿಗೆ ಕಳುಹಿಸಲಾಗುತ್ತಿದೆ. ಈ ಬೀಜಗಳು ಕೀಟ ಮತ್ತು ರೋಗಾಣುಗಳಿಂದ ಕೂಡಿದ್ದು, ಅವುಗಳನ್ನು ಬಿತ್ತನೆ ಮಾಡಿದರೆ ಬೆಳೆದ ಒಂದು ತಿಂಗಳಲ್ಲಿ ಕೀಟ ಮತ್ತು ರೋಗಾಣುಗಳಿಂದ ಬೆಳೆ ಸಂಪೂರ್ಣ ನಾಶವಾಗುತ್ತದೆ. ಅನಾಮದೇಯರಿಂದ ಬೀಜ ಬಂದರೆ ರೈತರು ಸ್ವೀಕರಿಸಬಾರದು ಎಂದು ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ. ತಿಳಿಸಿದ್ದಾರೆ.

ಈಗಾಗಲೇ ಇಂಗ್ಲೆಂಡ್  ಹಾಗೂ ಕೆನಡಾ ದೇಶಗಳಲ್ಲಿ ಅನೇಕ ರೈತರಿಗೆ ಇಂತಹ ಬೀಜಗಳನ್ನು ಕಳುಹಿಸಲಾಗಿದೆ. ಅಮೆರಿಕಾದಲ್ಲಿ 14 ಜಾತಿಯ ಹೂವಿನ ತಳಿ ಪತ್ತೆ ಮಾಡಲಾಗಿದೆ. ವಿವಿಧ ತಳಿಗಳ ಬಿತ್ತನೆ ಬೀಜದ ಈ ಪೊಟ್ಟಣಗಳನ್ನು ಯಾರು ಕಳುಹಿಸುತ್ತಾರೆ, ಇವು ಎಲ್ಲಿಂದ ಬರುತ್ತವೆ ಎಂಬ ವಿವರಗಳೇ ಇರುವುದಿಲ್ಲ. ಈ ಬೀಜಗಳ ಬಳಕೆಯಿಂದ ಕೃಷಿ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿ ಕ್ರಮೇಣ ಭೂಮಿಯೇ ಬಂಜರಾಗುವ ಸಾಧ್ಯತೆ ಇದೆ. ಆದ್ದರಿಂದ ಇಂತಹ ಬಿತ್ತನೆ ಬೀಜದ ಪೊಟ್ಟಣಗಳು ರೈತರು ಸ್ವೀಕರಿಸದೇ ವಾಪಸ್ ಕಳುಹಿಸಬೇಕು. ಒಂದು ವೇಳೆ ಅದನ್ನು ಪೊಟ್ಟಣ ಸಮೇತ ಸುಟ್ಟು ಹಾಕಬೇಕು. ಇಲ್ಲವೇ ಸಮೀಪದ ಕೃಷಿ ಇಲಾಖೆ ಅಧಿಕಾರಿಗಳಿಗೆ ಅಥವಾ ಹತ್ತಿರದ ಪೋಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಇಂತಹ ಬೀಜಗಳು ಬಂದಿರುವ ಬಗ್ಗೆ ವರದಿಯಾಗಿಲ್ಲ. ರೈತರು ಜಾಗರೂಕರಾಗಿರಬೇಕೆಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಶಂಭು.
ಮೆಗಾಮೀಡಿಯಾ ನ್ಯೂಸ್‌ ಬ್ಯುರೋ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English