- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಕೋವಿಡ್ ದೃಢ

vedavyas kamath [1]ಮಂಗಳೂರು: ಶಾಸಕ ವೇದವ್ಯಾಸ್ ಕಾಮತ್ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಹೋಂ ಐಸೋಲೇಷನ್‌ನಲ್ಲಿದ್ದಾರೆ. ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಶಾಸಕರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು.

ಈ ಕುರಿತು, ನನಗೆ ಸ್ವಲ್ಪ ಜ್ವರ ಬಂದ ಕಾರಣ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದೆ. ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ ಎಂದು ಸಾಮಾಜಿಕ ತಾಣದಲ್ಲಿ ಮೆಸೇಜ್ ಹಾಕಿದ್ದರು.

ಹೋಂ ಐಸೋಲೇಷನ್‌ನಲ್ಲಿರುವ ಬಗ್ಗೆ ಶಾಸಕರು ಮಾಹಿತಿ ಹಂಚಿಕೊಂಡಿದ್ದು, ಸಾರ್ವಜನಿಕರು ಆರೋಗ್ಯದ ಕಡೆ ಗಮನಹರಿಸುವಂತೆ ಮನವಿ ಮಾಡಿದ್ದು, ಸಾಂಕ್ರಾಮಿಕ ವಿರುದ್ಧ ಹೋರಾಟದಲ್ಲಿ ಗೆಲುವು ನಮ್ಮದೆ ಆಗಲಿದೆ ಎಂದು ತಿಳಿದ್ದಾರೆ.