ದ್ವಿತೀಯ ಪಿಯುಸಿ ಪರೀಕ್ಷೆ ಇಲ್ಲ, ಎಲ್ಲರೂ ಗ್ರೇಡಿಂಗ್ ಮೇಲೆ ಪಾಸ್

8:07 PM, Friday, June 4th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Suresh Kumarಬೆಂಗಳೂರು: ಕೋವಿಡ್ ವ್ಯಾಪಕವಾಗಿರುವ ಕಾರಣ ರಾಜ್ಯದಲ್ಲಿ ಈ ವರ್ಷ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದಿರಲು ತೀರ್ಮಾನಿಸಲಾಗಿದೆ. ಪ್ರಥಮ ಪಿಯುಸಿಯಲ್ಲಿ ತೆಗೆದುಕೊಂಡ ಅಂಕಗಳ ಆಧಾರದ ಮೇಲೆ ಗ್ರೇಡಿಂಗ್ ನೀಡಿ ಈ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗುವುದು  ಸಚಿವ ಸುರೇಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ. ಪ್ರಥಮ ಪಿಯುಸಿ ಫಲಿತಾಂಶದ ಆಧಾರದ ಮೇಲೆ ಗ್ರೇಡಿಂಗ್ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಮುಂಜಾಗ್ರತೆ ತೆಗೆದುಕೊಂಡು ಕಳೆದ ವರ್ಷ ಪರೀಕ್ಷೆ ನಡೆಸಿದ್ದೆವು. ಒಂದು ವರ್ಗ ಪರೀಕ್ಷೆ ನಡೆಸಬೇಕು ಎಂದರೆ ಕೆಲವರು ಬೇಡ ಎನ್ನುತ್ತಿದ್ದಾರೆ. ಹೀಗಾಗಿ, ಬಿಇಓಗಳ ಮೂಲಕ ಮಕ್ಕಳು ಮತ್ತು ಪೋಷಕರ ಅಭಿಪ್ರಾಯ ಪಡೆದಿದ್ದೇವೆ. ಈ ವರ್ಷವೂ ಪರೀಕ್ಷೆಗೆ ತಯಾರಿ ನಡೆಸಿದ್ದೆವು. ಆದರೆ, ಕಳೆದ ಮೂರು ದಿನಗಳಿಂದ ಈ ನಿರ್ಧರ ಮರುಪರಿಶೀಲನೆ ಬಗ್ಗೆ ಚರ್ಚೆ ನಡೆಸಿದ್ದೇನೆ. ಶಿಕ್ಷಣ ತಜ್ಞರ ಅಭಿಪ್ರಾಯ ಸಹ ಪಡೆದಿದ್ದೇನೆ.

ವಿದ್ಯಾರ್ಥಿಗಳಿಗೆ ಎ, ಎ+, ಬಿ, ಬಿ+ ಎಂಬಂತೆ ಗ್ರೇಡ್‌ ನೀಡಲಾಗುವುದು. ಯಾವುದೇ ವಿದ್ಯಾರ್ಥಿ ತನಗೆ ಸಿಕ್ಕ ಗ್ರೇಡ್‌ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರೆ, ತೃಪ್ತಿ ಇಲ್ಲ ಎಂದರೆ ಅಂತಹ ವಿದ್ಯಾರ್ಥಿಗಳಿಗೆ ಮಾತ್ರ ಕೋವಿಡ್ ಬಿಕ್ಕಟ್ಟು ಮುಗಿದ ನಂತರ ಪರೀಕ್ಷೆ ನಡೆಸಲಾಗುವುದು’ ಎಂದು ತಿಳಿಸಿದ್ದಾರೆ.

ದ್ವಿತೀಯ ಪರೀಕ್ಷೆ ನಡೆಸಲು ಹೋದರೆ ಕನಿಷ್ಟ 12 ದಿನ ಬೇಕಾಗುತ್ತದೆ. ಹೀಗಾಗಿ ನೀವು ಈ ಬಗ್ಗೆ ಬೇಸರವಾಗುವುದು ಬೇಡ. ಬದಲಾಗಿ ನೀಟ್ ಮತ್ತು ಸಿಇಟಿ ಪರೀಕ್ಷೆಗಳತ್ತ ಹೆಚ್ಚು ಗಮನ ಕೊಟ್ಟು ತಯಾರಿ ನಡೆಸಿ. ಅಷ್ಟಾದರೂ ಅಸಮಾಧಾನವಿದೆ ಎಂದಾದಲ್ಲಿ ಅಂತಹವರಿಗೆ ಮಾತ್ರ ಪರೀಕ್ಷೆ ವ್ಯವಸ್ಥೆ ಮಾಡೋಣ ಎಂದು ಸಚಿವರು ಭರವಸೆ ನೀಡಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English