ಜೂನ್ 8 ರಂದು ಶರಣು ಸಲಗಾರ್ ಹಾಗೂ ಬಸನಗೌಡ ತುರುವಿಹಾಳ್ ಶಾಸಕರಾಗಿ ಪ್ರಮಾಣ ವಚನ ಸ್ವೀಕಾರ

3:21 PM, Sunday, June 6th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Basavana Gowdaಬೆಂಗಳೂರು : ರಾಜ್ಯದ ಏಪ್ರಿಲ್ 17 ರಂದು ಬಸವ ಕಲ್ಯಾಣ ವಿಧಾನ ಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಶರಣು ಸಲಗಾರ್ ಹಾಗೂ ಮಸ್ಕಿ ವಿಧಾನ ಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಬಸನಗೌಡ ತುರುವಿಹಾಳ್ ಅವರು ಜೂನ್ 8 ರಂದು ಬೆಳಿಗ್ಗೆ 11-00 ಗಂಟೆಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಜ್ಯ ವಿಧಾನ ಸಭಾ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ವರದಿ: ಶಂಭು.
ಮೆಗಾಮೀಡಿಯಾ ನ್ಯೂಸ್‌ ಬ್ಯುರೋ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English