ಮಂಗಳೂರು : ದ.ಕ. ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಸೋಮವಾರ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಹಿರಿಯ ಮುಖಂಡ ಇಬ್ರಾಹಿಂ ಕೋಡಿಜಾಲ್, ಪ್ರಧಾನಿ ಮೋದಿ ನೇತೃತ್ವದ ಸರಕಾರ ಪದೇ ಪದೇ ಡೀಸೆಲ್, ಪೆಟ್ರೋಲ್ ಜತೆಗೆ ಅಡುಗೆ ಅನಿಲ ಬೆಲೆ ಏರಿಕೆ ಮಾಡಿ ಈ ಕೊರೋನ ಸಂಕಷ್ಟದಲ್ಲಿ ಮತ್ತಷ್ಟು ತೊಂದರೆ ಕೊಡುತ್ತಿದೆ ಎಂದರು.
ಒಂದು ತಿಂಗಳ ಅವಧಿಯಲ್ಕಿ 18 ಬಾರಿ ತೈಲಗಳ ಬೆಲೆ ಏರಿಕೆ ಮಾಡಲಾಗಿದೆ. 30 ರೂ.ಗೆ ಸಿಗಬೇಕಿದ್ದ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಜನರ ಶಾಪ ಸರಕಾರಕ್ಕೆ ತಟ್ಟದಿರದು ಎಂದು ಶಾಹುಲ್ ಹಮೀದ್ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಸದಾಶಿವ ಉಳ್ಳಾಲ್, ರಮಾನಂದ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English