ಕಾಂಗ್ರೆಸ್ ಯುವ ಮುಖಂಡನ ಅಂತ್ಯಕ್ರಿಯೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ, 25 ಕ್ಕೂ ಹೆಚ್ಚು ಜನರ ಮೇಲೆ ದೂರು ದಾಖಲು

4:02 PM, Monday, June 7th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Mahantheshಗದಗ: ಕಾಂಗ್ರೆಸ್ ಯುವ ಮುಖಂಡನ  ಅಂತ್ಯಕ್ರಿಯೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ 25 ಕ್ಕೂ ಹೆಚ್ಚು ಮಂದಿ  ಮೇಲೆಯ ಪೊಲೀಸರು ದೂರು ದಾಖಲು ಮಾಡಿದ್ದಾರೆ.

ಕೋವಿಡ್ ನಿಯಮ ಉಲ್ಲಂಘನೆ ಮಾಡಿದ 25 ಕ್ಕೂ ಹೆಚ್ಚು ಮಂದಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬಂದಿದ್ದರು. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ. ಗದಗ ನಗರದ ಗಂಗಾಪೂರ ನಿವಾಸಿಯಾದ ಮಹಾಂತೇಶ ಬೆಳಧಡಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರವಾದ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ.

ಜೂನ್ 5 ರಂದು ಗದಗದಲ್ಲಿ ಅವರ ಅಂತ್ಯ ಸಂಸ್ಕಾರ ನಡೆದಿತ್ತು. ಈ ಸಂದರ್ಭದಲ್ಲಿ ಪಾರ್ಥಿವ ಶರೀರ ನೋಡಲು ಹಾಗೂ ಅಂತ್ಯ ಸಂಸ್ಕಾರದಲ್ಲಿ ಅನೇಕ ಜನರು ನಿಯಮ ಉಲ್ಲಂಘಿಸಿ ಭಾಗಿಯಾಗಿದ್ದರು. ಅಷ್ಟೇ ಅಲ್ಲದೇ ಸಾಮಾಜಿಕ ಅಂತರ ಕಾಪಾಡಿರಲಿಲ್ಲ ಹಾಗೂ ಮಾಸ್ಕ್ ಕೂಡ ಧರಿಸಿರಲಿಲ್ಲ. ಈ ಕಾರಣದಿಂದ ದೂರು ದಾಖಲಿಸಲಾಗಿದೆ ಎಂದು ಗದಗನ ಶಹರ ಪೊಲೀಸ ಠಾಣೆ ಪೊಲೀಸರು ಹೇಳಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English