ಉಡುಪಿ ಜಿಲ್ಲೆಯಲ್ಲಿ 16 ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ

10:55 PM, Tuesday, June 8th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

udupi Lock Downಉಡುಪಿ : ಜಿಲ್ಲೆಯಲ್ಲಿ ಮತ್ತೆ 16 ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಕಾರ್ಕಳ ತಾಲೂಕಿನ ಬೆಳ್ಮಣ್, ಮಿಯಾರ್, ಪಳ್ಳಿ, ಕುಕ್ಕುಂದೂರ್, ನಲ್ಲೂರು, ಮರ್ಣೆ ಬೈಂದೂರು ತಾಲ್ಲೂಕಿನ ಶಿರೂರ್, ಜಡ್ಕಲ್, ನಾಡಾ, ಕುಂದಾಪುರ ತಾಲೂಕಿನ ಗಂಗೊಳ್ಳಿ, ಆಲೂರು ಕಾಪು ತಾಲೂಕಿನ ಬೆಳ್ವೆ, ಶಿರ್ವ ಗ್ರಾಮ ಪಂಚಾಯತಿ ಬ್ರಹ್ಮಾವರ ತಾಲ್ಲೂಕಿನ ಕೊಕ್ಕರ್ಣೆ‌, ಅವರ್ಸೆ ಮತ್ತು ಹೆಬ್ರಿ ತಾಲೂಕಿನ ವರಂಗ ಗ್ರಾಮ ಪಂಚಾಯತಿ ಜೂನ್ 10ರ ಗುರುವಾರದಿಂದ ಜೂನ್ 14ರ ಸೋಮವಾರದವರೆಗೆ ಸಂಪೂರ್ಣ ಲಾಕ್‌ಡೌನ್ ಆಗಲಿದೆ.

16 ಗ್ರಾಮ ಪಂಚಾಯಿತಿಗಳಲ್ಲಿ ಪ್ರಸ್ತುತ 50 ಕ್ಕೂ ಹೆಚ್ಚು ಪ್ರಕರಣಗಳಿವೆ.

ಪಂಚಾಯತ್ ಮಟ್ಟದಲ್ಲಿ ಕೋವಿಡ್ ನಿಯಂತ್ರಿಸಲು ನಾವು ಪಿಡಿಒಗಳಿಗೆ ಮಾರ್ಗದರ್ಶನ ನೀಡುತ್ತಿದ್ದೇವೆ. ಮನೆಗಳ ಸೀಲ್ ಡೌನ್ ಸಹ ಸಕಾರಾತ್ಮಕ ಫಲಿತಾಂಶಗಳನ್ನು ನೀಡಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English