ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಬೀದಿ ಬದಿ ವ್ಯಾಪಾರಸ್ಥರಿಗೆ ಕೋರೊನಾ ನಿಯಂತ್ರಣ ಲಸಿಕೆ ನೀಡುವ ಕಾಯ೯ಕ್ರಮವು ಬುಧವಾರದಂದು ಜರಗಿದ್ದು ಸದ್ರಿ ಕಾಯ೯ಕ್ರಮಕ್ಕೆ ಮೇಯರ್ ಪ್ರೇಮಾನಂದ ಶೆಟ್ಟಿಯವರು ಚಾಲನೆ ನೀಡಿದರು.
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕಾಯ೯ ನಿವ೯ಹಿಸುವ ಎಲ್ಲಾ ಬೀದಿ ಬದಿ ವ್ಯಾಪಾರಸ್ಥರಿಗೆ ಸರಕಾರದ ಮಾಗ೯ಸೂಚಿಯಂತೆ ಲಸಿಕೆ ಕಾಯ೯ಕ್ರಮವು ಪಾಲಿಕೆಯ ಕುದ್ಮುಲ್ ರಂಗ ರಾವ್ ಮಿನಿ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸುಮಾರು 200 ಮಂದಿ ಬೀದಿ ಬದಿ ವ್ಯಾಪಾರಸ್ಥರಿಗೆ ಲಸಿಕೆಯನ್ನು ನೀಡಲು ವ್ಯವಸ್ಥೆ ಮಾಡಲಾಗಿತ್ತು.
ಕಾಯ೯ಕ್ರಮದಲ್ಲಿ ಲಸಿಕೆಯ ಜೊತೆಗೆ ಮಲೇರಿಯಾ ಜ್ವರದ ಪರೀಕ್ಷೆಯನ್ನು ನಡೆಸಲಾಗಿತ್ತು. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಗಾಯತ್ರಿ ನಾಯಕ್, ಜಿಲ್ಲಾ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳಾದ ಡಾ| ನವೀನ್ ಕುಲಾಲ್, ಡಾ| ರಾಜೇಶ್, ಬೀದಿ ಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷರು, ಮತ್ತು ಜಿಲ್ಲಾ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು
Click this button or press Ctrl+G to toggle between Kannada and English