ಮಂಗಳೂರು : 14ನೇ ಮಹಡಿಯ ಮನೆಯಿಂದ ಜಿಗಿದು ಮಹಿಳೆ ಆತ್ಮಹತ್ಯೆ

1:46 PM, Thursday, June 10th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Pushpalathaಮಂಗಳೂರು : ಅಪಾರ್ಟ್ ಮೆಂಟ್ ನ 14ನೇ ಮಹಡಿಯಲ್ಲಿರುವ ಮನೆಯಿಂದ ಮಹಿಳೆಯೊಬ್ಬರು ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕುಲಶೇಖರ ಚೌಕಿ ಎಂಬಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಪುಷ್ಪಲತಾ(64) ಎಂದು ಗುರುತಿಸಲಾಗಿದೆ.

ಪುಷ್ಪಲತಾ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಕುಲಶೇಖರ ಚೌಕಿಯಲ್ಲಿರುವ ಪ್ಲಾಮ ಗ್ರಾಂಡ್ ಅಪಾರ್ಟ್ ಮೆಂಟ್ ನ   14ನೇ ಮಹಡಿಯಲ್ಲಿರುವ ಮನೆಯ ಬಾಲ್ಕನಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾನಸಿಕ ಒತ್ತಡ ಸಮಸ್ಯೆಯಿಂದ ಬಳಲುತ್ತಿದ್ದರೆನ್ನಲಾದ ಇವರು ಈ ಹಿಂದೆಯೂ ಆತ್ಮಹತ್ಯೆಗೆ ಯತ್ನ ನಡೆಸಿದ್ದರೆಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

                       

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English