ದಕ್ಷಿಣ ಕನ್ನಡ ಮತ್ತು ಇತರ ಎಂಟು ಜಿಲ್ಲೆಗಳಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ಮುಂದುವರಿಕೆ

4:08 PM, Thursday, June 10th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Koata Srinivasಮಂಗಳೂರು : ರಾಜ್ಯದ ಎಂಟು ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದೇ ಇರುವುದರಿಂದ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರಿಯಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ನಡೆಸಿದ ವಿಡಿಯೊ ಕಾನ್ಫರೆನ್ಸ್ ಬಳಿಕ ಅವರು ಮಂಗಳೂರಿನಲ್ಲಿ  ಮಾಧ್ಯಮದೊಂದಿಗೆ ಹೇಳಿದರು,

ಜಿಲ್ಲೆಯಲ್ಲಿ ಒಂದು ವಾರ ಲಾಕ್ ಡೌನ್ ವಿಸ್ತರಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದೆವು. ಇದಕ್ಕೆ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದಾರೆ. ಅದರಂತೆ ಜಿಲ್ಲೆಯಲ್ಲಿ ಜೂ.14ರ ಬಳಿಕ ಬಹುತೇಕ ಮತ್ತೆ ಒಂದು ವಾರಗಳ ಲಾಕ್ ಡೌನ್ ಮುಂದುವರಿಸಲಾಗುವುದು ಎಂದವರು ಹೇಳಿದರು.

ಜೂ.11ರಂದು ಸಂಸದರು, ಶಾಸಕರ ಸಭೆಯಲ್ಲಿ  ಸೀಮಿತ ವಿಷಯಗಳಿಗೆ ಲಾಕ್ಡೌನ್ ನಿಂದ ರಿಯಾಯಿತಿ ನೀಡಬಹುದು ಎಂಬುದರ ಕುರಿತಂತೆ ಚರ್ಚೆ  ಮಾಡಲಾಗುವುದು. ಸಭೆಯಲ್ಲಿ ಕೂಲಿ ಕಾರ್ಮಿಕರಿಗೆ ಮತ್ತು ಕೈಗಾರಿಕಾ ಕಾರ್ಮಿಕರಿಗೆ‌ ನೆರವಾಗುವ ನಿಟ್ಟಿನಲ್ಲಿ ಕೆಲವೊಂದು ಸಡಿಲಿಕೆ ಮಾಡುವ ಬಗ್ಗೆ ಚರ್ಚಿಸಿ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English