ರೋಹಿಣಿ ಸಿಂಧೂರಿಯವರನ್ನು ಅಮಾನತು ಮಾಡಿ ಆಂಧ್ರಕ್ಕೆ ಕಳುಹಿಸಿ : ಸಾ.ರಾ.ಮಹೇಶ್

8:03 PM, Thursday, June 10th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

SaRa Maheshಮೈಸೂರು : ಶಾಸಕ ಸಾ.ರಾ.ಮಹೇಶ್ ಒಡೆತನದಲ್ಲಿರುವ ಸಾ‌.ರಾ. ಚೌಲ್ಟ್ರಿ ರಾಜಕಾಲುವೆ ಮೇಲೆ ನಿರ್ಮಾಣ ಆಗಿದೆ ಎಂದು  ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ದಾಖಲೆ ಬಿಡುಗಡೆ ಮಾಡಿದ ಬೆನ್ನಲ್ಲೇ  ಶಾಸಕ ಸಾ.ರಾ.ಮಹೇಶ್ ಸಿಂಧೂರಿ ವಿರುದ್ಧ ಪ್ರಾದೇಶಿಕ ಆಯುಕ್ತರ ಕಚೇರಿ ಎದುರು  ಏಕಾಂಗಿಯಾಗಿ ಗುರುವಾರ ಪ್ರತಿಭಟನೆಗೆ ಕುಳಿತ್ತಿದ್ದಾರೆ.

ಈ ಸಂದರ್ಭ ಮಾತನಾಡಿದ ಅವರು  ಸಾ‌.ರಾ. ಚೌಲ್ಟ್ರಿ ರಾಜಕಾಲುವೆ ಮೇಲೆ ನಿರ್ಮಾಣ ಆಗಿದ್ದೇ  ಆದರೆ ಉನ್ನತ ಮಟ್ಟದ ಅಧಿಕಾರಿಗಳು ಜಾಗದ ಸರ್ವೇ ಮಾಡಲಿ‌. ರಾಜಕಾಲುವೆ ಮೇಲೆ ನಿರ್ಮಾಣ ಆಗಿದ್ದರೆ ಅದನ್ನು ಸಾರ್ವಜನಿಕರ ಬಳಕೆಗಾಗಿ ರಾಜ್ಯಪಾಲರಿಗೆ ಹಸ್ತಾಂತರ ಮಾಡುತ್ತೇನೆ. ಮಾತ್ರವಲ್ಲ, ನಾನು ಸಾರ್ವಜನಿಕ ಜೀವನದಿಂದಲೇ ನಿವೃತ್ತಿ ಹೊಂದುತ್ತೇನೆ.‌ ಒಂದು ವೇಳೆ ರೋಹಿಣಿ ಸಿಂಧೂರಿ ಮಾಡಿರುವ ಆರೋಪ ಸುಳ್ಳಾದರೆ ಐಎಎಸ್ ಹುದ್ದೆಯಿಂದಲೇ ಅವರನ್ನು ಅಮಾನತು ಮಾಡಬೇಕು. ಮಕ್ಕಳನ್ನು ಆಡಿಸಿಕೊಂಡು, ಅಡುಗೆ ಮಾಡಿಕೊಂಡಿರಲು ಆಂಧ್ರಕ್ಕೆ ಕಳುಹಿಸಬೇಕು ಎಂದು ಸಾ.ರಾ.ಮಹೇಶ್ ಹೇಳಿದರು.

ಸಾ.ರಾ.ಮಹೇಶ್ ಸಾ.ರಾ.ಮಹೇಶ್ ಒಡೆತನದಲ್ಲಿರುವ ಸಾ‌.ರಾ. ಚೌಲ್ಟ್ರಿ ದಾಖಲೆ ಬಿಡುಗಡೆ ಮಾಡಿದ್ದಾರೆ. ಲಿಂಗಾಂಬುದಿ ಕೆರೆ ಜಾಗದ ನಕ್ಷೆ, ಮಹಾನಗರ ಪಾಲಿಕೆ ಆಯುಕ್ತರ ಆದೇಶದ ಪತಿ ಬಿಡುಗಡೆ ಮಾಡಿದ ಮಹೇಶ್, ಲಿಂಗಾಂಬುದಿ ಕೆರೆಯಿಂದ 30 ಮೀಟರ್ ಅಂತರ ಕಾಯ್ದುಕೊಳ್ಳಲಾಗಿದೆ. ಬಫರ್ ಝೋನ್ ಒತ್ತುವರಿಯಾಗಿದೆ ಎಂಬುದು ಸುಳ್ಳು ಎಂದು ಸಮರ್ಥಿಸಿಕೊಂಡರು.

                       

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English