ಹಾಸನ: ಬಿಜೆಪಿ ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆಯ ಬಳಿಕ ಸಿಎಂ ಬಿ.ಎಸ್. ಯಡಿಯೂರಪ್ಪ ನೇರ ಸಂದೇಶ ನೀಡಿದ್ದು ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಹೇಳಿದ್ದಾರೆ.
ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನನ್ನ ಮೇಲೆ ಇರಿಸಿರುವ ವಿಶ್ವಾಸ ಇರಿಸಿದ್ದಾರೆ ಎಂದರು.
ನನ್ನ ಅವಧಿಯ ಎರಡು ವರ್ಷ ಶಕ್ತಿ ಮೀರಿ ಕೆಲಸ ಮಾಡುವೆ ಎಂದು ಸಿಎಂ ಬದಲಾವಣೆಗೆ ಪ್ರಯತ್ನ ಮಾಡುತ್ತಿರುವವರಿಗೆ ನೇರ ಸಂದೇಶ ರವಾನಿಸಿದ್ದಾರೆ.
ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ. ಇಲ್ಲಿಯವರೆಗೆ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಯಾವಾಗ ರಾಜೀನಾಮೆ ನೀಡಲು ಹೇಳುತ್ತಾರೋ ಆಗಲೇ ಕೊಡುತ್ತೇನೆ ಎಂದು ಕೆಲ ದಿನಗಳ ಹಿಂದೆ ಹೇಳಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು. ಸಿಎಂ ಬದಲಾವಣೆಗೆ ಸ್ವಪಕ್ಷೀಯರ ಪ್ರಯತ್ನದ ಮಧ್ಯೆ ಸಿಎಂ ಈ ಹೇಳಿಕೆ ಚರ್ಚೆಗೆ ಕಾರಣವಾಗಿತ್ತು.
ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರನ್ನಾಗಲಿ, ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕಟೀಲ್ ಅವರನ್ನಾಗಲಿ ಕೆಳಗಿಳಿಸುವ ಯಾವುದೇ ಯೋಚನೆ ಹೈಕಮಾಂಡ್ ಗೆ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಗುರುವಾರ ಹೇಳಿದ್ದರು.
Click this button or press Ctrl+G to toggle between Kannada and English