ದಲಿತ ಬಂಡಾಯ ಚಳವಳಿ ನಾಯಕ, ಕವಿ ಡಾ. ಸಿದ್ದಲಿಂಗಯ್ಯ ಕೊರೋನಾಗೆ ಬಲಿ

6:50 PM, Friday, June 11th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Siddalingayyaಬೆಂಗಳೂರು :   ದಲಿತ ಬಂಡಾಯ ಚಳವಳಿಯಲ್ಲಿ ಸಕ್ರಿಯರಾಗಿದ್ದ ದಲಿತ ಕವಿ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಸಿದ್ದಲಿಂಗಯ್ಯ (66) ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.

ಇವರು ಮಣಿಪಾಲ್‌ ಆಸ್ಪತ್ರೆಯಲ್ಲಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು.

ದಲಿತರ ಧ್ವನಿಯಾಗಿದ್ದ ಸಿದ್ದಲಿಂಗಯ್ಯ, ರಾಜ್ಯದ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದರು. ಸಾಮಾಜಿಕ ಸಮಾನತೆಯ ಕವನ ರಚಿಸಿದ್ದರು.

ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದ ಸಿದ್ದಲಿಂಗಯ್ಯ ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು

ಸಿದ್ಧಲಿಂಗಯ್ಯನವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ‘ಮಾಗಡಿ’ ತಾಲೂಕಿನ  ‘ಮಂಚನಬೆಲೆ’ ಗ್ರಾಮದಲ್ಲಿ 1954 ರಲ್ಲಿ ಜನಿಸಿದರು. ತಂದೆ ದೇವಯ್ಯ, ತಾಯಿ ಶ್ರೀಮತಿ ವೆಂಕಮ್ಮ. ಮಲ್ಲೇಶ್ವರಂನ ಸರ್ಕಾರಿ ಪ್ರೌಢಶಾಲೆ ಇವರ ವಿದ್ಯಾಭ್ಯಾಸ ಮಾಡಿದ್ದರು.  ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು.

ಸಿದ್ದಲಿಂಗಯ್ಯ ಅವರು  ಹೊಲೆ ಮಾದಿಗರ ಹಾಡು, ಮೆರವಣಿಗೆ, ಸಾವಿರಾರು ನದಿಗಳು, ಕಪ್ಪು ಕಾಡಿನ ಹಾಡು, ನನ್ನ ಜನಗಳು ಮತ್ತು ಇತರ ಕವಿತೆಗಳು, ಸಮಕಾಲೀನ ಕನ್ನಡ ಕವಿತೆ ಭಾಗ-3,4 (ಸಂಪಾದನೆ ಇತರರೊಂದಿಗೆ), ಏಕಲವ್ಯ, ನೆಲಸಮ, ಪಂಚಮ, ,ಸದನದಲ್ಲಿ ಸಿದ್ದಲಿಂಗಯ್ಯ ಭಾಗ 1 ಮತ್ತು ಭಾಗ 2, ಆತ್ಮಕಥೆಯಾದ ಊರುಕೇರಿ- ಭಾಗ-1 ಮತ್ತು ಬಾಗ 2  ಮುಂತಾದ  ಕೃತಿಗಳನ್ನು ರಚಿಸಿದ್ದಾರೆ.

ಸಿದ್ದಲಿಂಗಯ್ಯನವರು ಶ್ರವಣಬೆಳಗೊಳದಲ್ಲಿ ನಡೆದ 81ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಜಾನಪದ ತಜ್ಞ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಪ್ರೆಸಿಡೆನ್ಸಿ ಇನ್ಷಿಟ್ಯೂಷನ್ ಪ್ರಶಸ್ತಿ, ಆಳ್ವಾಸ್ ನುಡಿಸಿರಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ, ಪಂಪ ಪ್ರಶಸ್ತಿ ಸೇರಿ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದರು.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English