ಅಂಗವೈಕಲ್ಯವಿದೆ ಎಂದು ಜನಿಸಿರುವ ಮಗುವನ್ನು ಆಸ್ಪತ್ರೆಯ ನೀರಿನ ತೊಟ್ಟಿಗೆ ಹಾಕಿದ ದಂಪತಿ

1:44 PM, Sunday, June 13th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

infant ಚಾಮರಾಜನಗರ : ಅಂದಾಜು 6 ದಿನದ ಗಂಡು ಶಿಶುವನ್ನು ಅಂಗವೈಕಲ್ಯ ಹೊತ್ತುಕೊಂಡು ಜನಿಸಿರುವ ಕಾರಣ ಹೆತ್ತವರು  ಮಗುವನ್ನು ಪ್ಲಾಸ್ಟಿಕ್ ಕವರ್ ನಲ್ಲಿ ಹಾಕಿ ಖಾಸಗಿ ಆಸ್ಪತ್ರೆಯ ಖಾಲಿ ನೀರಿನ ತೊಟ್ಟಿಯಲ್ಲಿ ಎಸೆದ ಘಟನೆ  ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ನಡೆದಿದೆ.

ಅಂದಾಜು 6 ದಿನದ ಗಂಡು ಶಿಶು ಇದಾಗಿದ್ದು, ಕರುಳಬಳ್ಳಿ ಕತ್ತರಿಸದೇ ಹಾಗೆ ಬಿಟ್ಟಿದ್ದು ಕಂಡುಬಂದಿದೆ.

ಆಸ್ಪತ್ರೆ ಶವಾಗಾರದ ಬಳಿ ಪ್ಲಾಸ್ಟಿಕ್ ಕವರಿನಲ್ಲಿ ಶಿಶು ಶವ ಪತ್ತೆಯಾಗಿದೆ. ಸಿಬ್ಬಂದಿ ಹೋದಾಗ ದುರ್ನಾತ ಬರುತ್ತಿರುವುದನ್ನುಗಮನಿಸಿ ]ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ .  ಆಸ್ಪತ್ರೆಯಲ್ಲೇ ಹೆರಿಗೆಯಾಗಿದ್ದರೇ ಕರುಳ ಬಳ್ಳಿಯನ್ನು ಕತ್ತರಿಸುತ್ತಿದ್ದರಿಂದ ಆಸ್ಪತ್ರೆಯಲ್ಲಿ ಈ ಮಗು ಹುಟ್ಟಿಲ್ಲ ಎಂದು  ಸಿಬ್ಬಂದಿ ಹೇಳಿದ್ದಾರೆ.

ಸಿಸಿಟಿವಿ ಪರಿಶೀಲಿಸಲಾಗುತ್ತಿದ್ದು ತನಿಖೆ ನಡೆಸಲಾಗುತ್ತಿದೆ. ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English