ಶಿವಮೊಗ್ಗದಲ್ಲಿ ತಲೆ ಎತ್ತಲಿರುವ ‘ಕಮಲ’ ಆಕೃತಿಯ ಅತಿ ದೊಡ್ಡ ವಿಮಾನ ನಿಲ್ದಾಣ

4:01 PM, Sunday, June 13th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

shivamogga Airportಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ  ಪ್ರಗತಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪರಿಶೀಲನೆ ನಡೆಸಿದ್ದು, ಇದೇ ವೇಳೆ ವಿಮಾನ ನಿಲ್ದಾಣ ಕಟ್ಟಡ ವಿನ್ಯಾಸವನ್ನು ಅನಾವರಣೆ ಮಾಡಿದ್ದಾರೆ.

ಮುಖ್ಯಮಂತ್ರಿಗಳು ಅನಾವರಣಗೊಳಿಸಿದ ಕಟ್ಟಡದ ವಿನ್ಯಾಸವು ಕಮಲದ ಆಕೃತಿಯಲ್ಲಿರುವುದರಿಂದ ವಿಮಾನ ನಿಲ್ದಾಣಕ್ಕೂ ಕೇಸರಿ ಸ್ಪರ್ಶವನ್ನು ನೀಡಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಶಿವಮೊಗ್ಗದ ಪಿಡಬ್ಲ್ಯುಡಿಯ ಕಾರ್ಯನಿರ್ವಾಹಕ ಎಂಜಿನಿಯರ್ (ವಿಶೇಷ ವಿಭಾಗ) ಸಂಪತ್ ಅವರು ಈ ಕುರಿತು ಪ್ರತಿಕ್ರಿಯೆ ನೀಡಿ, ಕಟ್ಟಡದ ವಿನ್ಯಾಸವನ್ನು ಮೊದಲ ಬಾರಿಗೆ ಶನಿವಾರ ಅನಾವರಣಗೊಳಿಸಲಾಗಿದ್ದು, ಇದು ಬಹುತೇಕ ಅಂತಿಮಗೊಂಡಿದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ಎರಡನೇ ಅತಿ ದೊಡ್ಡ ವಿಮಾನ ನಿಲ್ದಾಣವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಭರವಸೆ ನೀಡಿದ್ದಾರೆ. ಕಟ್ಟಡವನ್ನು ರೂ.384 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ, ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಲೆ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ , ಸಚಿವ ಕೆ.ಎಸ್.ಈಶ್ವರಪ್ಪ, ವಿಧಾನಸಬೆ ಮಾಜಿ ಸ್ಪೀಕರ್ ಡಿಹೆಚ್ ಶಣಕರಮೂರ್ತಿಯವರೂ ಅವರು ಶಿವಮೊಗ್ಗ ಜಿಲ್ಲೆಯವರಾಗಿರುವುದರಿಂದ ಕಮಲ ಆಕೃತಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English