ಕೊರೊನಾಗಿಂತ ಅಪಾಯಕಾರಿ ನಾಯಕತ್ವ ಬದಲಾವಣೆ : ಬೆಕ್ಕಿನ ಕಲ್ಮಠದ ಸ್ವಾಮೀಜಿ

8:59 PM, Sunday, June 13th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Muruga Raghavendraಶಿವಮೊಗ್ಗ : ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಮಠಕ್ಕೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ಭೇಟಿ ನೀಡಿ ಮಠದ ಬೆಕ್ಕಿನ ಕಲ್ಮಠದ ಮುರುಘಾ ರಾಜೇಂದ್ರ ಸ್ವಾಮೀಜಿಯವರಲ್ಲಿ ಮಾತುಕತೆ  ನಡೆಸಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರವಾಹ ಎದುರಾಯಿತು. ಆಗ ಪ್ರವಾಹ ಪರಿಸ್ಥಿಯನ್ನು ಒಬ್ಬರೇ ಎದುರಿಸಿದರು. ಪ್ರವಾಹ ಮುಗಿಯಿತು ಎನ್ನುವಷ್ಟರಲ್ಲಿ ಕೊರೋನಾ ಎದುರಾಗಿದೆ. ಕೊರೋನಾ ಮಹಾಮಾರಿಯನ್ನು ತಡೆಗಟ್ಟುವಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಕೊರೊನಾಗಿಂತ ಅಪಾಯಕಾರಿ ಎಂದು ಸ್ವಾಮೀಜಿಯವರು ಹೇಳಿದ್ದಾರೆ. ಕರ್ನಾಟಕಕ್ಕೆ ಎಂತಹ ನಾಯಕತ್ವ ಬೇಕು ಎಂಬುದನ್ನು ಜನತೆ ನಿರ್ಧರಿಸಬೇಕು. ನಾಯಕತ್ವಕ್ಕೆ ಅಡೆತಡೆ ತರುವ ಕೆಲಸವನ್ನು ಯಾರೂ ಮಾಡಬಾರದು. ಅಂತಹ ಕೆಲಸವನ್ನು ಯಾರಾದರೂ ಮಾಡಿದರೆ ತಮ್ಮ ತಲೆಯ ಮೇಲೆ ತಾವೇ ಕಲ್ಲು ಎತ್ತಿ ಹಾಕಿಕೊಂಡ ಹಾಗೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

ರಾಜ್ಯದ ಇಂತಹ ವಿಷಮ ಪರಿಸ್ಥಿತಿಯಲ್ಲಿ ಬೇರೆ ಯಾರಾದರೂ ಆಗಿದ್ದರೆ ಧೃತಿಗೆಟ್ಟು ಹೋಗುತ್ತಿದ್ದರು. ಬೇರೆ ಯಾರಿಂದಲೂ ಇಂತಹ ಸಂಕಷ್ಟ ಎದುರಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಯಡಿಯೂರಪ್ಪ ಅವರು ಹೋರಾಟದ ಹಿನ್ನೆಲೆಯಿಂದ ಬಂದವರು ಈಗಾಗಿಯೇ ಎಲ್ಲವನ್ನು ಸಮರ್ಥವಾಗಿ ಎದುರಿಸುತ್ತಿದ್ದಾರೆ ಎಂದಿದ್ದಾರೆ.

ರಾಜ್ಯದ ರೈತರಿಗೆ, ಮಠ ಮಾನ್ಯಗಳಿಗೆ ದೇಣಿಗೆ ನೀಡಿದ ಮುಖ್ಯಮಂತ್ರಿ ಇದ್ದರೆ ಅದು ಯಡಿಯೂರಪ್ಪ ಮಾತ್ರ. ಯಡಿಯೂರಪ್ಪ ಅವರು ಉತ್ತಮವಾಗಿ ಕೆಲಸ ಮಾಡುತ್ತಾರೆ ಎಂದು ಜನರು ಅವರನ್ನು ನೆನಪಿಸಿಕೊಳ್ಳುತ್ತಾರೆ. ಕೆಲಸ ಮಾಡದಿದ್ದರೆ ಯಾರು ನೆನಪಿಸಿಕೊಳ್ಳುತ್ತಾರೆ, ಅವರ ಮುಂದೆ ಏನು ಹೇಳುವುದಕ್ಕೆ ಸಾಧ್ಯವಾಗುತ್ತದೆ ಎಂದರು.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English