ಮಂಗಳೂರು: ಕರ್ನಾಟಕ ಮತ್ತು ಕೇರಳ ಸರಕಾರ ತುಳು ಭಾಷೆಯನ್ನು ಅಧಿಕೃತ ರಾಜ್ಯ ಭಾಷೆಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿ ಜೈ ತುಳುನಾಡು ಸೇರಿದಂತೆ ಇತರೇ ಸಂಘಟನೆಗಳು ಮತ್ತು ತುಳು ಭಾಷಿಗರಿಂದ ರವಿವಾರದಂದು ಟ್ವಿಟರ್ ಅಭಿಯಾನ ಆರಂಭಗೊಂಡಿದೆ.
ರವಿವಾರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಆಯೋಜಿಸಲಾದ ಟ್ವೀಟ್ ಅಭಿಯಾನಕ್ಕೆ ಸಾವಿರಾರು ಮಂದಿ ಟ್ವೀಟ್ ಮಾಡಿ ಬೆಂಬಲ ಸೂಚಿಸಿದ್ದಾರೆ. ಟ್ವೀಟ್ ಅಭಿಯಾನದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ 1 ಲಕ್ಷಕ್ಕೂ ಹೆಚ್ಚಿನ ಟ್ವೀಟ್ ಗಳು ದಾಖಲಾಗಿವೆ.
ತುಳುಭಾಷೆಯ ಸ್ಥಾನಮಾನಕ್ಕಾಗಿ ಈ ಹಿಂದೆಯೂ ಟ್ವೀಟ್ ಅಭಿಯಾನ ನಡೆಸಿ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿತ್ತು. ಅಲ್ಲದೆ, ತುಳು ಸಾಹಿತ್ಯ ಅಕಾಡೆಮಿ, ಜನಪ್ರತಿನಿಧಿಗಳು ಗಣ್ಯರು ಕೂಡ ರಾಜ್ಯ, ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದರು.
Click this button or press Ctrl+G to toggle between Kannada and English