ಹುಬ್ಬಳ್ಳಿ : ಹುಬ್ಬಳ್ಳಿಯ ಕಿಮ್ಸ್ ಆವರಣದಲ್ಲಿ ಟೈ ಹುಬ್ಬಳ್ಳಿ ಅವರ ವತಿಯಿಂದ ಕೋವಿಡ್ ಸೋಂಕಿತರನ್ನು ತುರ್ತಾಗಿ ಆಸ್ಪತ್ರೆಗೆ ದಾಖಲಿಸಲು ನೆರವಾಗಲೆಂದು ನೀಡಿದ ಅಂಬ್ಯುಲೆನ್ಸ್ ವಾಹನವನ್ನು ಕಿಮ್ಸ್ ಆಡಳಿತ ಮಂಡಳಿಗೆ ಸಚಿವ ಜಗದೀಶ್ ಶೆಟ್ಟರ್ ಹಸ್ತಾಂತರಿಸಿದರು.
ವೈದ್ಯಕೀಯ ತುರ್ತು ಅಗತ್ಯತೆಗಳನ್ನು ಪೂರೈಸಲು ಮತ್ತು ಪ್ರಥಮ ಚಿಕಿತ್ಸೆ ನೀಡಲು ಬೇಕಾದ ಸಕಲ ವ್ಯವಸ್ಥೆಯುಳ್ಳ ಸುಸಜ್ಜಿತ ಅಂಬ್ಯುಲೆನ್ಸ್ ವಾಹನ ಇದಾಗಿದ್ದು, ಸಾರ್ವಜನಿಕರಿಗೆ ತುರ್ತು ಪರಿಸ್ಥಿತಿಯಲ್ಲಿ ತುಂಬಾ ಸಹಕಾರಿಯಾಗಲಿದೆ. ಸಮಾಜ ಸೇವಾ ಕಾರ್ಯದಲ್ಲಿ ತೊಡಗಿಕೊಂಡು, ಜನರ ಆರೋಗ್ಯ ದೃಷ್ಟಿಯಿಂದ ಇಂತಹ ಸೇವೆ ಒದಗಿಸುತ್ತಿರುವ ತಂಡಕ್ಕೆ ಸಚಿವ ಜಗದೀಶ್ ಶೆಟ್ಟರ್ ಅಭಿನಂದಿಸಿದರು.
ಈ ಸಂದರ್ಭದಲ್ಲಿ ವಿ.ಆರ್.ಎಲ್. ಸಮೂಹ ಸಂಸ್ಥೆಯ ಮುಖ್ಯಸ್ಥರಾದ ಆನಂದ ಸಂಕೇಶ್ವರ್, ಕಿಮ್ಸ್ ನ ಆಡಳಿತಾಧಿಕಾರಿಗಳು ಹಾಗೂ ಇತರೆ ಪ್ರಮುಖರು ಹಾಜರಿದ್ದರು.
Click this button or press Ctrl+G to toggle between Kannada and English