ಸಂಚಾರಿ ವಿಜಯ್‌ಗೆ ಕೋಮಾದಲ್ಲಿ, ಚಿಕಿತ್ಸೆ ಮುಂದುವರೆದಿದೆ ಎಂದ ಅಪೋಲೋ ಆಸ್ಪತ್ರೆ ವೈದ್ಯರು

3:25 PM, Monday, June 14th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Sanchari Vijayಬೆಂಗಳೂರು : ಬೈಕ್ ಅಪಘಾತಕ್ಕೀಡಾಗಿ ನಟ ಸಂಚಾರಿ ವಿಜಯ್ ಕೋಮಾದಲ್ಲಿ ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಯ  ಐಸಿಯು ನಲ್ಲಿ ಚಿಕಿತ್ಸೆ ಮುಂದುವರಿದಿದೆ.

ಮೂಲತಃ ರಂಗಭೂಮಿ ಕಲಾವಿದರಾಗಿರುವ ಸಂಚಾರಿ ವಿಜಯ್, ‘ನಾನು ಅವನಲ್ಲ, ಅವಳಲ್ಲ’ ಸಿನಿಮಾ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರು. ಸಿನಿಮಾ ಜೊತೆಯಲ್ಲಿ `ಉಸಿರು’ ಹೆಸರಿನ ತಂಡವನ್ನು ಕಟ್ಟಿಕೊಂಡು ಲಾಕ್‍ಡೌನ್ ನಲ್ಲಿ ಸಂಕಷ್ಟ ಸಿಲುಕಿದವರಿಗೆ ಸಹಾಯ ಮಾಡುತ್ತಿದ್ದರು.

ಬೈಕ್ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ನಟನನ್ನು ಬನ್ನೇರುಘಟ್ಟದ ಅಪೋಲೋ ಆಸ್ಪತ್ರೆಗೆ ಶನಿವಾರ ರಾತ್ರಿ  ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮೆದುಳಿಗೆ ಗಂಭೀರ ಗಾಯಗಳಾಗಿ ನಿಷ್ಕ್ರಿಯವಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

ಸಂಚಾರಿ ವಿಜಯ್ ಗೆ ಚಿಕಿತ್ಸೆ ಶುರುವಾಗಿ 36 ಗಂಟೆಗೆ ಆಗಿದೆ. ಆಸ್ಪತ್ರೆಗೆ ಬಂದಾಗ ಅವರ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಆಸ್ಪತ್ರೆಗೆ ಬಂದ ಕೆಲವೇ ನಿಮಿಷದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಯ್ತು. ಎಷ್ಟೇ ಚಿಕಿತ್ಸೆ ಕೊಟ್ರು ಸ್ಪಂದಿಸ್ತಿಲ್ಲ. . ವಿಜಯ್ ಉಸಿರಾಟ ಕೂಡ ಕ್ಷೀಣವಾಗಿದೆ. ಚಿಕಿತ್ಸೆ ಕೊಟ್ರೂ ರಿಕವರಿ ಕಷ್ಟ ಎಂಬುದಾಗು ವೈದ್ಯರು ಮಾಹಿತಿ ನೀಡಿದ್ದದ್ದಾರೆ.

ಶನಿವಾರ ರಾತ್ರಿ ಗೆಳೆಯನ ಮನೆಯಲ್ಲಿ ಊಟ ಮಾಡಿಕೊಂಡು ಬೈಕಿನಲ್ಲಿ ನಟ ಹಿಂದಿರುಗುತ್ತಿದ್ದರು. ಗೆಳೆಯ ನವೀನ್ ಬೈಕ್ ಓಡಿಸುತ್ತಿದ್ದು, ವಿಜಯ್ ಹಿಂಬದಿಯಲ್ಲಿ ಕುಳಿತಿದ್ದರು. ಜೆಪಿ ನಗರದ 7ನೇ ಹಂತದಲ್ಲಿ ಬೈಕ್ ಸ್ಕಿಡ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿತ್ತು. ಅಪಘಾತದ ರಭಸಕ್ಕೆ ನಟ ಬೈಕಿನಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯರು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದರು.

ವಿಜಯ್ ಬಲ ತೊಡೆ ಭಾಗ ಮುರಿದಿದ್ದು, ಮೆದುಳಿನ ಭಾಗದಲ್ಲಿ ತೀವ್ರ ರಕ್ತಸ್ರಾವವಾಗಿದೆ. ತಲೆಗೆ ಪೆಟ್ಟು ಬಿದ್ದ ಪರಿಣಾಮ ತೀವ್ರ ರಕ್ತಸ್ರಾವವಾಗಿದ್ದರಿಂದ ರಾತ್ರಿಯೇ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಮೆದುಳಿನ ರಕ್ತಸ್ತ್ರಾವ ತಡೆಗೆ ಸರ್ಜರಿ ನಡೆದಿತ್ತು. ಡಾ.ಅರುಣ್.ಎಲ್.ನಾಯ್ಕ್ ಟೀಂ ಸಂಚಾರಿ ವಿಜಯ್ ಗೆ ಚಿಕಿತ್ಸೆ ನಿಡಿದ್ದರು. ಆರೋಗ್ಯದ ಮಾಹಿತಿ ನೀಡಲು ಆಸ್ಪತ್ರೆ 48 ಗಂಟೆ ಸಮಯ ಕೇಳಿತ್ತು. ಅಲ್ಲದೆ ನಟನಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಯುತ್ತಿದೆ.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English