ಪ್ರತಿಷ್ಠಿತ ವೃತ್ತ/ಮೇಲ್ಸೇತುವೆಗೆ ಖ್ಯಾತ ಕವಿ ಡಾ. ಸಿದ್ದಲಿಂಗಯ್ಯ ಅವರ ನಾಮಕರಣ ಮಾಡುವಂತೆ ಮುಖ್ಯಮಂತ್ರಿಗಳಿಗೆ ಶ್ರೀ ಬಿ. ಶ್ರೀರಾಮುಲು ಮನವಿ

3:57 PM, Monday, June 14th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Siddalinayya ಬೆಂಗಳೂರು : ಸಾಮಾಜಿಕ ಸಮಾನತೆಗಾಗಿ ಕಾವ್ಯ, ಸಾಹಿತ್ಯಗಳನ್ನು ರಚಿಸಿ ಪ್ರೇರಣೆ ನೀಡಿ, ಜನಮಾನಸದಲ್ಲಿರುವ ಖ್ಯಾತ ಲೇಖಕ, ಕವಿ ಡಾ. ಸಿದ್ದಲಿಂಗಯ್ಯ ಅವರ ಸ್ಮರಣಾರ್ಥ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಪ್ರತಿಷ್ಠಿತ ವೃತ್ತ ಅಥವಾ ಮೆಲ್ಸೇತೆಗೆ ಡಾ. ಸಿದ್ದಲಿಂಗಯ್ಯ ಅವರ ನಾಮಕರಣ ಮಾಡುವಂತೆ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಮಾಜ ಕಲ್ಯಾಣ ಖಾತೆ ಸಚಿವ ಶ್ರೀ ಬಿ. ಶ್ರೀರಾಮುಲು ಅವರು ಮನವಿ ಪತ್ರವನ್ನು ಸಲ್ಲಿಸಿದ್ದಾರೆ.

ಡಾ.ಸಿದ್ದಲಿಂಗಯ್ಯ ಅವರ ನಿಧನದಿಂದ ಸಾಹಿತ್ಯಕ್ಷೇತ್ರಕ್ಕೆ ಹಾಗೂ ಇಡೀ ರಾಜ್ಯಕ್ಕೆ ಭರಿಸಲಾರದ ನಷ್ಟ ಉಂಟಾಗಿದೆ. ಡಾ. ಸಿದ್ದಲಿಂಗಯ್ಯ ಅವರ ಸಿದ್ದಾಂತ ಮತ್ತು ಆದರ್ಶಗಳು ಸದಾ ಅನುಕರಣೀಯ.

ಡಾ. ಸಿದ್ದಲಿಂಗಯ್ಯ ಅವರು ಸಾಮಾಜಿಕ ಸಮಾನತೆಗಾಗಿ ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಸಾಹಿತ್ಯ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿ ಖ್ಯಾತರಾಗಿದ್ದಾರೆ. ಎರಡು ಬಾರಿ ವಿಧಾನಪರಿಷತ್ ಸದಸ್ಯರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಅವಿಸ್ಮರಣೀಯವಾಗಿ ಕಾರ್ಯನಿರ್ವಹಿಸಿದ್ದಾರೆ. 81 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗುರುತರವಾದ ನಿರ್ಣಯಗಳನ್ನು ಕೈಗೊಂಡಿದ್ದಾರೆ.

ಇವರು ರಾಜ್ಯೋತ್ಸವ ಪ್ರಶಸ್ತಿ, ಡಾ. ಬಿ.ಆರ್. ಅಂಬೇಡ್ಕರ್ ಶತಮಾನೋತ್ಸವ ವಿಶೇಷ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಡಾ. ಬಾಬು ಜಗಜೀವನರಾಮ್ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಬಾಜನರಾಗಿದ್ದಾರೆ.

ಇವರ ಅಪರಿಮಿತ ಸಾಹಿತ್ಯ ಕೃಷಿ, ಜನಮಾನಸದಲ್ಲಿರುವ ಇವರ ಚಿಂತನೆಗಳು, ಆದರ್ಶಗಳು ಶ್ಲಾಘನೀಯವಾಗಿದ್ದು, ಸಾಹಿತ್ಯ ಪ್ರೇಮಿಗಳಿಗೆ, ಮುಂದಿನ ಪೀಳಿಗೆಗೆ ಡಾ. ಸಿದ್ದಲಿಂಗಯ್ಯ ಅವರ ಸಿದ್ದಾಂತ, ಆದರ್ಶಗಳು, ಚಿಂತನೆಗಳು ಪ್ರೇರಣೆ ನೀಡಿ, ಸದಾ ಸ್ಮೃತಿಪಠಲದಲ್ಲಿರುವಂತಹ ಕಾರ್ಯವನ್ನು ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿಗಳಿಗೆ ಶ್ರೀ ಬಿ. ಶ್ರೀರಾಮುಲು ಮನವಿ ಪತ್ರ ಸಲ್ಲಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English