ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನೈಜ ಬಿಪಿಎಲ್ ಫಲಾನುಭವಿಗಳ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆಯಾಗಿರುವುದು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರ ಗಮನಕ್ಕೆ ಬಂದಿತ್ತು. ಈ ವಿಷಯದ ಬಗ್ಗೆ ಅವರು ಜಿಲ್ಲಾಧಿಕಾರಿ ಮತ್ತು ಆಹಾರ ಇಲಾಖೆಯ ಅಧಿಕಾರಿಗಳು ಜೊತೆ ಮಾತುಕತೆ ನಡೆಸಿರುತ್ತಾರೆ.
ಈ ವಿಷಯದ ಕುರಿತು ಆಹಾರ ಇಲಾಖೆಯ ರಾಜ್ಯದ ಆಯುಕ್ತರೊಂದಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಅವರು ಪ್ರಸ್ತಾಪಿಸಿದಾಗ ಆಯುಕ್ತರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಆ ಬಳಿಕ ಆಹಾರ ಇಲಾಖೆಯ ಜಿಲ್ಲೆಯ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು ನೈಜ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
ಆದಾಯ ಪ್ರಮಾಣ ಪತ್ರ ತಿದ್ದುಪಡಿ ಮಾಡುವ ಸಮಯದಲ್ಲಿ ಕೆಲವೊಂದು ತಾಂತ್ರಿಕ ಸಮಸ್ಯೆಗಳಿಂದ ಆಗಿರುವ ತಪ್ಪುಗಳನ್ನು ತಕ್ಷಣ ಸರಿಪಡಿಸಲು ಜಿಲ್ಲಾಧಿಕಾರಿಯವರು ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿರುತ್ತಾರೆ.
ಇನ್ನು ಆದಾಯ ಪ್ರಮಾಣಪತ್ರದ ತಪ್ಪಿನಿಂದಾಗಿ ಎಪಿಎಲ್ ಆಗಲಿರುವ ಕಾರ್ಡ್ ಗಳನ್ನು ಬಿಪಿಎಲ್ ಕಾರ್ಡ್ ಗಳಾಗಿ ಉಳಿಸಲು ಕ್ರಮ ಕೈಗೊಳ್ಳಬೇಕಾದ ಬಗ್ಗೆ ಮತ್ತು ನೈಜ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಯಾವುದೇ ಅನ್ಯಾಯ ಆಗಬಾರದು ಎಂದು ಶಾಸಕ ಡಾ.ಭರತ್ ಶೆಟ್ಟಿಯವರು ಆಗ್ರಹಿಸಿದ್ದಾರೆ.
Click this button or press Ctrl+G to toggle between Kannada and English