- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಒಮನ್ ಪ್ರಜೆ, ಗಾಂಜಾ ಹಾಗೂ ಎಂಡಿಎಂಎ ವಶ

omanian [1]ಮಂಗಳೂರು :  ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಒಮನ್ ಪ್ರಜೆ ಹಾಗೂ ಹಿಮಾಚಲ ಪ್ರದೇಶದ ಯುವಕನೊಬ್ಬನನ್ನು ಮಂಗಳೂರು ಪೊಲೀಸರು  ಬಂಧಿಸಿದ್ದಾರೆ.

ಬಂಧಿತರನ್ನು ಒಮನ್ ಪ್ರಜೆ ಅಹ್ಮದ್ ಮುಸಬಾ ಅಲ್ ಮಹಾಮಾನಿ (34) ಹಾಗೂ ಹಿಮಾಚಲ ಪ್ರದೇಶದ ರಾಮ್ (22) ಎಂದು ಗುರುತಿಸಲಾಗಿದೆ.

ಒಮನ್ ಪ್ರಜೆ ಅಹ್ಮದ್ ಮುಸಬಾ 6 ತಿಂಗಳ ಹಿಂದೆ ಗೋವಾಕ್ಕೆ ಟೂರಿಸ್ಟ್ ವೀಸಾದಲ್ಲಿ ಬಂದಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಆಗಮಿಸಿದ್ದ. ಈ ಮಧ್ಯೆ ನಗರದ ಹೊಟೇಲೊಂದರಲ್ಲಿ ಹಿಮಾಚಲ ಪ್ರದೇಶದ ರಾಮ್ ಜತೆ ಬಂಧಿಸಲಾಗಿದ್ದು, ಬಂಧಿತರಿಂದ ಎಂಡಿಎಂಎ ಹಾಗೂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಎನ್‌ಡಿಪಿಎಸ್ ಕಾಯ್ದೆ ಹಾಗೂ ಒಮನ್ ಪ್ರಜೆಯ ಪಾಸ್‌ಪೋರ್ಟ್ ಅವಧಿಯು ಮುಗಿದು ಈತ ಅಕ್ರಮವಾಗಿ ನೆಲೆಸಿದ್ದರಿಂದ ಆ ನೆಲೆಯಲ್ಲಿಯೂ ಈತನ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಬಂಧಿತರಿಂದ 51 ಗ್ರಾಂ ಗಾಂಜಾ ಹಾಗೂ 2 ಗ್ರಾಂನಷ್ಟು ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.

ಗಾಂಜಾ ಹಾಗೂ ಎಂಡಿಎಂಎ ಆರೋಪಿಗಳ ಕೈಗೆ  ಹೇಗೆ ಬಂತು ಹಾಗೂ ಗೋವಾದಿಂದ ಡ್ರಗ್ಸ್ ತಂದು ಇಲ್ಲಿ ಸ್ಥಳೀಯವಾಗಿ ಮಾರಾಟ ಮಾಡುತ್ತಿದಾರೆಯೇ ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಕಮಿಷನರ್ ತಿಳಿಸಿದ್ದಾರೆ.