ಮಂಗಳೂರು : ಕೊರೋನ ಸಂಕಷ್ಟದ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಪತ್ರಕರ್ತರಿಗೆ ದಿನಸಿ ಕಿಟ್ ನೆರವು ನೀಡುತ್ತಿರುವುದು ಶ್ಲಾಘನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಅವರು ಮಂಗಳವಾರ ನಗರದ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಸಭಾಂಗಣದಲ್ಲಿ ಪತ್ರಕರ್ತರಿಗೆ ಕಿಟ್ ವಿತರಿಸಿದರು.
ಲಾಕ್ ಡೌನ್ ನ್ನು ಶೀಘ್ರ ತೆರವು ಗೊಳಿಸುವ ಆಶಯವನ್ನು ಸರಕಾರ ಹೊಂದಿದೆ ಎಂದರು.
ಕೊರೋನ ಸಂಕಷ್ಟದ ಸಂದರ್ಭ ದಲ್ಲಿ ಬ್ಯಾಂಕ್ ತನ್ನ ಗ್ರಾಹಕರು ಅಲ್ಲದೆ ತೊಂದರೆಗೀಡಾದ ಜನರಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಾ ಬಂದಿದೆ ಎಂದು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು.
ಶಾಸಕ ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಬ್ಯಾಂಕಿನ ನಿರ್ದೇಶಕರು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ, ಲೀಡ್ ಬ್ಯಾಂಕ್ ಪ್ರತಿನಿಧಿ ಪ್ರವೀಣ್, ನಬಾರ್ಡ್ ಪ್ರತಿನಿಧಿ ಸಂಗೀತ ಕರ್ತ, ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಸಹಕಾರಿ ಸಂಘಗಳ ನೋಂದವಣಾಧಿಕಾರಿ ಪ್ರವೀಣ್ ನಾಯಕ್ ಮೊದಲಾವರು ಉಪಸ್ಥಿತರಿದ್ದರು. ನಿರ್ದೇಶಕ ದೇವಿ ಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕ ಶಶಿಕುಮಾರ್ ರೈ ವಂದಿಸಿದರು.
Click this button or press Ctrl+G to toggle between Kannada and English