ಸುಬ್ರಹ್ಮಣ್ಯ : ಸೋಮವಾರದಿಂದ ಸುಬ್ರಹ್ಮಣ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸೀಲ್ ಡೌನ್ ಮಾಡಲಾಗಿದ್ದರೂ ಹೊರ ಜಿಲ್ಲೆಗಳಿಂದ ಕುಕ್ಕೆಗೆ ಯಾತ್ರಿಕರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುತ್ತಿದ್ದಾರೆ.
ರಾಜ್ಯದ ಇತರ ಜಿಲ್ಲೆಗಳಲ್ಲಿ ಆನ್ ಲಾಕ್ ಇರುವುದರಿಂದ ಮತ್ತು ಮಂಗಳವಾರ ಆಶ್ಲೇಷ ನಕ್ಷತ್ರ ಇದ್ದುದರಿಂದ ಹೆಚ್ಚಿನ ಭಕ್ತರು ಆಗಮಿಸಿದ್ದರು.
ಸೋಮವಾರದಿಂದ ಸುಬ್ರಹ್ಮಣ್ಯ ಪಂಚಾಯತಿ ವ್ಯಾಪ್ತಿಯ ಪ್ರವೇಶ ರಸ್ತೆಗಳನ್ನು ಬಂದ್ ಮಾಡಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಕುಲ್ಕುಂದ ಭಾಗದಿಂದ ಕುಕ್ಕೆ ಕಡೆಗೆ ಯಾತ್ರಿಕರ ವಾಹನಗಳು ಆಗಮಿಸುತ್ತಿದೆ. ಅಲ್ಲಿ ನಿರ್ಮಿಸಿರುವ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಹಲವು ವಾಹನಗಳನ್ನು ಆದೇಶದ ಬಗ್ಗೆ ಮಾಹಿತಿ ನೀಡಿ ಹಿಂದಕ್ಕೆ ಕಳುಹಿಸಿದ್ದಾರೆ.
ಕೆಲವು ವಾಹಗಳು ಒಳ ರಸ್ತೆ ಮೂಲಕ ರಥ ಬೀದಿಗೆ ಬಂದಿವೆ ಎಂದು ವರದಿಯಾಗಿದೆ. ಸುಬ್ರಹ್ಮಣ್ಯ ಠಾಣಾಧಿಕಾರಿ ವಾಮನ ನೇತೃತ್ವದಲ್ಲಿ ಸಿಬ್ಬಂದಿಗಳು ಹಾಗೂ ಗೃಹರಕ್ಷಕ ಸಿಬ್ಬಂದಿ ಕರ್ತವ್ಯದಲ್ಲಿದ್ದಾರೆ.
Click this button or press Ctrl+G to toggle between Kannada and English