5 ವಿದ್ಯುತ್‌ ಕಂಬಗಳ ಜೊತೆ, ರಸ್ತೆಗುರುಳಿದ ಟ್ರಾನ್ಸ್‌ಫಾರ್ಮರ್‌

3:52 PM, Wednesday, June 16th, 2021
Share
1 Star2 Stars3 Stars4 Stars5 Stars
(No Ratings Yet)
Loading...

Transformer ಮಂಗಳೂರು :  ನಿರಂತರವಾಗಿ ಸುರಿಯುತ್ತಿರುವ ಮಳೆ,  ಭಾರಿ ಗಾಳಿಯಿಂದ  ಬುಧವಾರ ಮಧ್ಯಾಹ್ನ ಮಂಗಳಾದೇವಿ ಬಳಿ ಟ್ರಾನ್ಸ್‌ಫಾರ್ಮರ್‌ ಒಂದು  ರಸ್ತೆಗೆ ಬಿದ್ದಿದ್ದು, ಅಕ್ಕಪಕ್ಕದಲ್ಲಿದ್ದ 5 ವಿದ್ಯುತ್‌ ಕಂಬಗಳೂ ತುಂಡಾಗಿವೆ.

ರಸ್ತೆಯಲ್ಲಿ ವಾಹನ ಸಂಚಾರ ಇಲ್ಲದಿದ್ದುದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.

ಘಟನೆಯಿಂದ ಮಂಗಳಾದೇವಿ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯವುಂಟಾಗಿದೆ. ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಧಾವಿಸಿ, ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ. ಟ್ರಾನ್ಸ್‌ಫಾರ್ಮರ್‌ ಇದ್ದ ಜಾಗದಲ್ಲಿ ಮರಗಳೂ ಇದ್ದು, ರಸ್ತೆಯ ಇನ್ನೊಂದು ಬದಿಗೆ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English