ನಡೆದಾಡುವ ದೇವರ ಮನೆಯ ಜೀರ್ಣೋದ್ಧಾರ ಕ್ಕೆ ಸಚಿವ ಅರವಿಂದ ಲಿಂಬಾವಳಿ ಭೂಮಿ ಪೂಜೆ‌

7:35 PM, Thursday, June 17th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

limbavali ರಾಮನಗರ : ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಸಿದ್ದಗಂಗಾ ಮಠದ ಶ್ರೀಶ್ರೀಶ್ರೀ ಶಿವಕುಮಾರ ಸ್ವಾಮೀಜಿ ಅವರ ಹುಟ್ಟಿದ ಮನೆ ಯ ಜೀರ್ಣೋದ್ಧಾರ ಕಾಮಗಾರಿಗೆ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಜೂನ್ 16 ರ ಗುರುವಾರ ಮಾಗಡಿ ತಾಲೂಕಿನ ವೀರಾಪುರದಲ್ಲಿ ಭೂಮಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿ ಇದೊಂದು ಪುಣ್ಯದ ಕೆಲಸವಾಗಿದ್ದು ವೀರಾಪುರದಲ್ಲಿ ರಸ್ತೆ, ಶಾಲೆ ಹಾಗೂ ದೇವಸ್ಥಾವನ್ನು ಸಹ ಅಭಿವೃದ್ಧಿ ಪಡಿಸಲಾಗುವುದು‌. ಶ್ರೀಗಳ ಮನೆಯನ್ನು ಜೀರ್ಣೋದ್ಧಾರಗೊಳಿಸಿ ಸುಸಜ್ಜಿತ ವಸ್ತುಸಂಗ್ರಹಾಲಯ ನಿರ್ಮಾಣ ಮಾಡಲಾಗುವುದು. ಅಲ್ಲಿ
ಶ್ರೀ ಗಳು ಉಪಯೋಗಿಸುತ್ತಿದ್ದ ವಸ್ತುಗಳನ್ನು ಇಡಲಾಗುವುದು ಎಂದರು.

limbavali ವೀರಾಪುರ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಸಿದ್ದಗಂಗಾ ಮಠದ ಶ್ರೀಶ್ರೀಶ್ರೀ ಶಿವಕುಮಾರ ಸ್ವಾಮೀಜಿ ಅವರ 111 ಅಡಿ ಪುತ್ಥಳಿ ನಿರ್ಮಾಣ ಸಾಂಸ್ಕೃತಿಕ ಹಾಗೂ ಪಾರಂಪರಿಕ ಪಾರ್ಕ್ ಗೆ ಸರ್ಕಾರ 25 ಕೋಟಿ ಅನುದಾನ ನೀಡಿದ್ದು, ಕೆ.ಆರ್.ಐ.ಡಿ.ಎಲ್ ಅವರು ಯಾವುದೇ ಸೇವಾ ಶುಲ್ಕ ಪಡೆಯದೆ ಪೂರ್ಣ ಹಣವನ್ನು ಕಾಮಗಾರಿಗೆ ವಿನಿಯೋಗಿಸಲಿದ್ದಾರೆ. ಕಾಮಗಾರಿಯು ನಿಧಾನಗತಿಯಲ್ಲಿ ಸಾಗುತ್ತಿದ್ದು, ಶೀಘ್ರವಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

ಇಲ್ಲಿ ನಿರ್ಮಾಣವಾಗುವ 111ಅಡಿ ಪ್ರತಿಮೆಯನ್ನು ಶಿವಗಂಗೆ ಹಾಗೂ ಸಿದ್ದಗಂಗೆ ಯಿಂದ ನೋಡುವ ರೀತಿ ನಿರ್ಮಾಣ ಮಾಡಲಾಗುವುದು. ಪ್ರತಿಮೆಯ ಕೆಳಭಾಗದಲ್ಲಿ ಶ್ರೀ ಗಳ ಜೀವನ ಚರಿತ್ರೆಯ ಮ್ಯೂಸಿಯಂ ನಿರ್ಮಾಣ ಹಾಗೂ ಜೀವನ ಚರಿತ್ರೆಯ ಕಿರುಚಿತ್ರ ವೀಕ್ಷಿಸಲು ಆಡಿಟೋರಿಯಂ ಸಹ ನಿರ್ಮಿಸಲಾಗುವುದು.

ಶ್ರೀ ಗಳ ಹುಟ್ಟೂರಿನಿಂದ ಸಿದ್ದಗಂಗೆ ಕರ್ಮಭೂಮಿಗೆ 22 ಕಿ.ಮೀ ಇದ್ದು,ಜನರು ಪಾದಯಾತ್ರೆ ಮಾಡುವಂತೆ ರಸ್ತೆ ಅಭಿವೃದ್ಧಿಯಾಗಬೇಕು. , ಅದಿರಂಗ, ಮಧ್ಯರಂಗ, ಅಂತ್ಯರಂಗ ದರ್ಶನ ಪಡೆದರೆ ಪುಣ್ಯ ಬರುತ್ತದೆ ಎಂಬ ನಂಬುಕೆ ಇದೆ. ಅದೇ ರೀತಿ ಶ್ರೀಗಳ ಹುಟ್ಟೂರು ವೀರಾಪುರ , ಸಿದ್ದಗಂಗಾ ಹಾಗೂ ಶಿವಗಂಗಾ ಸ್ಥಳಗಳ ದರ್ಶನ ಪಡೆದರೆ ಪುಣ್ಯ ಸಿಗುತ್ತದೆ ಎಂದರು.

limbavaliಇದಕ್ಕೂ ಮುನ್ನ ಸಚಿವರು ಪ್ರತಿಮೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಕಾರ್ಯಕ್ರಮದಲ್ಲಿ ಕೆ.ಆರ್.ಐ.ಡಿ.ಎಲ್ ಅಧ್ಯಕ್ಷ ರುದ್ರೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ, ರಾಮನಗರ ಉಪವಿಭಾಗಾಧಿಕಾರಿ ಮಂಜುನಾಥ್, ಮಾಗಡಿ ತಹಶೀಲ್ದಾರ್ ಶ್ರೀನಿವಾಸ್ ಪ್ರಸಾದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವಿನಯ್ ಕುಮಾರ್ ಉಪಸ್ಥಿತರಿದ್ದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English