ಮಂಗಳೂರು : ನಟ ಸಂಚಾರಿ ವಿಜಯ್ ಮರಣ ನಂತರವೂ ಏಳು ಜನರಿಗೆ ಅಂಗಗಳನ್ನು ನೀಡಿ ಇತರರಿಗೆ ಜೀವದಾನದ ಮಾದರಿಯಾಗಿದ್ದಾರೆ ಎಂದು ಮಾಜಿ ಸಚಿವ ಅಭಯ ಚಂದ್ರ ಜೈನ್ ತಿಳಿಸಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸಂಚಾರಿ ವಿಜಯ್ ಭಾವಚಿತ್ರಕ್ಕೆ ಹೂಮಾಲೆ ಅರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದ ಅವರು, ಮರಣಾ ನಂತರ ತಾನೂ ಕೂಡಾ ತನ್ನ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿರುವುದಾಗಿ ಪ್ರಕಟಿಸಿದರು.
ನಾನು ಮರಣ ಹೊಂದಿದ ಬಳಿಕ ನನ್ನ ಅಂಗಾಂಗಳನ್ನು ದಾನ ಮಾಡುವಂತೆ ವಿಲ್ ಬರೆಯಲು ನಿರ್ಧರಿಸಿದ್ದೇನೆ ಎಂದು ಹೇಳಿದ ಅವರು, ದ.ಕ. ಜಿಲ್ಲಾ ಕಾಂಗ್ರೆಸ್‌ನ ಯುವಕರು, ರಾಜಕಾರಣಿಗಳು ಕೂಡಾ ಈ ಕಾರ್ಯಕ್ಕೆ ಮುಂದಾಗಬೇಕು ಎಂದು ಅವರು ಹೇಳಿದರು.
ವಿದೇಶಗಳಲ್ಲಿ ಈ ಅಂಗಾಂಗ ದಾನ ಪ್ರಕ್ರಿಯೆ ಸಹಜವಾಗಿ ನಡೆಯುತ್ತದೆ. ನಮ್ಮಲ್ಲಿಯೂ ಇಂತಹ ಪ್ರಕ್ರಿಯೆ ಮೂಲಕ ಕಣ್ಣು, ಹೃದಯ, ಕಿಡ್ನಿ ಸೇರಿದಂತೆ ದೇಹದ ವಿವಿಧ ಭಾಗಗಳಿಗಾಗಿ ಹಾತೊರೆಯುತ್ತಿರುವವರ ಬಾಳಿಗೆ ನಾವು ಬೆಳಕಾಗಬಹುದು. ಅದನ್ನು ಸಂಚಾರಿ ವಿಜಯ್ ಮಾಡಿ ತೋರಿಸಿದ್ದಾರೆ ಎಂದು ಅವರು ಹೇಳಿದರು.
ಯುವ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್ ರೈ, ಮುಖಂಡರಾದ ವಿನಯ್ ರಾಜ್, ಶಾಲೆಟ್ ಪಿಂಟೋ, ಸದಾಶಿವ ಉಳ್ಳಾಲ್, ಲಾರೆನ್ಸ್, ಪ್ರಕಾಶ್ ಸಾಲ್ಯಾನ್, ಸವದ್ ಸುಳ್ಯ, ನಿಖಿಲ್ ಪೂಜಾರಿ, ಫಾರೂಕ್, ಪದ್ಮನಾಭ ಮೊದಲಾದವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English