ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಆರು ತಿಂಗಳ ನಂತರ : ಕೆ.ಎಸ್ ಈಶ್ವರಪ್ಪ

2:18 PM, Saturday, June 19th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

ks-Eswarappaದಾವಣಗೆರೆ : ಕರೊನಾ ಅಲೆ ಸಂಪೂರ್ಣವಾಗಿ ಮುಗಿದಿಲ್ಲ. ಡಿಸೆಂಬರ್‌ವರೆಗೆ ಯಾವುದೇ ಚುನಾವಣೆ ನಡೆಯಲ್ಲ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಯನ್ನೂ ಮಾಡಲ್ಲ. ಚುನಾವಣೆ ಬೇಡ ಎಂದು ಸರ್ಕಾರ ನಿರ್ಧಾರ ತೆಗೆದುಕೊಂಡಿದೆ ಎಂದು ಕೆ.ಎಸ್ ಈಶ್ವರಪ್ಪ ಹೇಳಿದರು.

ಕರೊನಾ ಉಲ್ಬಣಿಸದಿದ್ದಲ್ಲಿ ರಾಜ್ಯದಲ್ಲಿ ಇಷ್ಟೊತ್ತಿಗೆ ತಾಪಂ ಮತ್ತು ಜಿಪಂ ಚುನಾವಣೆ ರಂಗೇರುತ್ತಿತ್ತು. 2ನೇ ಅಲೆಯ ತೀವ್ರತೆ ಹೆಚ್ಚುತ್ತಿದ್ದಂತೆ ಇನ್ನೂ 6 ತಿಂಗಳ ಕಾಲ ರಾಜ್ಯದಲ್ಲಿ ಯಾವುದೇ ಚುನಾವಣೆ ನಡೆಯಲ್ಲ ಎಂದು ತಿಂಗಳ ಹಿಂದೆಯೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ ಎಂದರು.

ಸದ್ಯ ಲಾಕ್ಡೌನ್ ಸಡಿಲಿಕೆ ಆಗುತ್ತಿದ್ದಂತೆ ಚುನಾವಣಾ ಸ್ಪರ್ಧಾಕಾಂಕ್ಷಿಗಳು ತೆರೆಮರೆಯಲ್ಲಿ ಭರದ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಲಾಕ್ಡೌನ್ ಸಂಪೂರ್ಣವಾಗಿ ಅನ್ಲಾಕ್ ಆಗುತ್ತಿದ್ದಂತೆ ಚುನಾವಣೆ ನಡೆಯಲಿದೆ ಎಂದು ಹಲವು ಲೆಕ್ಕಾಚಾರ ಹಾಕಿಕೊಂಡಿದ್ದಾರೆ. ರಾಜ್ಯದಲ್ಲಿನ ಮೂರು ಪಕ್ಷಗಳ ಟಿಕೆಟ್ ಆಕಾಂಕ್ಷಿತರು ಸ್ಥಳೀಯವಾಗಿ ಮತದಾರರ ಮನ ಸೆಳೆಯಲು ಇನ್ನಿಲ್ಲದ ಕಸರತ್ತು ಮಾಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಇಂತಹ ಸಂದರ್ಭದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಚುನಾವಣೆ ಯಾವಾಗ ನಡೆಯುತ್ತೆ ಎಂಬ ಕೂತೂಹಲಕ್ಕೆ ತೆರೆ ಎಳೆದಿದ್ದಾರೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English