ತ್ಯಾಜ್ಯ ನಿರ್ವಹಣೆ ಯಲ್ಲಿ ಲೋಪವಾದರೆ ಕ್ರಮ ಸಚಿವ ಅರವಿಂದ ಲಿಂಬಾವಳಿ ಎಚ್ಚರಿಕೆ

9:14 PM, Saturday, June 19th, 2021
Share
1 Star2 Stars3 Stars4 Stars5 Stars
(No Ratings Yet)
Loading...

Waste ಬೆಂಗಳೂರು : ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಯಾವುದೇ ಲೋಪಗಳು ಕಂಡುಬಂದಲ್ಲಿ ಅದಕ್ಕೆ ಸಂಬಂಧಪಟ್ಟ ಗುತ್ತಿಗೆದಾರರು ಮತ್ತು ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಎಚ್ಚರಿಕೆ ನೀಡಿದ್ದಾರೆ.

ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಕುರಿತಂತೆ ಬಿಬಿಎಂಪಿ ಅಧಿಕಾರಿಗಳು, ಸ್ವಯಂಸೇವಾ ಸಂಸ್ಥೆಗಳು ಹಾಗೂ ಗುತ್ತಿಗೆದಾರರ ಜೊತೆ ತಮ್ಮ ಕಚೇರಿಯಲ್ಲಿ ಸಭೆ ನಡೆಸಿದ ಸಚಿವ ಅರವಿಂದ ಲಿಂಬಾವಳಿ ಸಮರ್ಪಕ ತ್ಯಾಜ್ಯ ನಿರ್ವಹಣೆ ಆದ್ಯತೆ ಆಗಬೇಕೆಂದರು.

ಕಸ ನಿರ್ವಹಣೆಯ ಬಗ್ಗೆ ಹಲವು ದೂರುಗಳು ನಮ್ಮ ಗಮನಕ್ಕೆ ಬಂದಿದೆ ಇಂತಹ ಯಾವುದೇ ದೂರುಗಳು ಬಂದರೂ ಅದಕ್ಕೆ ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆ. ಸಾರ್ವಜನಿಕರು ತ್ಯಾಜ್ಯ ನಿರ್ವಹಣೆ ಬಗ್ಗೆ ನೀಡುವ ದೂರುಗಳನ್ನು ಅಧಿಕಾರಿಗಳು ತಕ್ಷಣವೇ ಪರಿಶೀಲಿಸಿ ಬಗೆಹರಿಸಬೇಕು, ಯಾವುದೇ ದೂರುಗಳು ಬರದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಹೇಳಿದರು.

Wasteಕಸ ಸಂಗ್ರಹಣೆ ಗುತ್ತಿಗೆ ಪಡೆದ ಗುತ್ತಿಗೆದಾರರಿಗೆ ಕಸವಿಂಗಡಣೆಗೆ ಅವಶ್ಯವಾದ ಸೂಕ್ತ ಸ್ಥಳವಕಾಶ ಇದೆಯೇ ಎಂಬುದನ್ನು ಸ್ಥಳಪರೀಕ್ಷೆ ಮಾಡಿ ವರದಿ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ತ್ಯಾಜ್ಯ ವಿಂಗಡನೆಗೆ ಸೂಕ್ತ ಸ್ಥಳ ಹೊಂದಿರದ ಗುತ್ತಿಗೆದಾರ ಗುತ್ತಿಗೆ ರದ್ದುಪಡಿಸಿ ಎಂದು ಸೂಚಿಸಿದರು.

ತ್ಯಾಜ್ಯ ನಿರ್ವಹಣೆಯ ಬಗ್ಗೆ ಸ್ವಯಂಸೇವಾ ಸಂಸ್ಥೆಗಳ ಅಭಿಪ್ರಾಯವನ್ನು ಪಡೆದ ಸಚಿವರು ಸಮರ್ಪಕ ತ್ಯಾಜ್ಯ ನಿರ್ವಹಣೆಗೆ ಅವರುಗಳ ಸಕ್ರಿಯ ಭಾಗವಹಿಸುವಿಕೆ ಮತ್ತು ಸಹಕಾರವೂ ಬೇಕು ಎಂದು ಮನವಿ ಮಾಡಿದರು.

ಒಣಕಸ ಸಂಗ್ರಹಿಸುವವರು ಅದನ್ನು ಸಂಗ್ರಹಿಸುವ ವಿಧಾನದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ತಿಳುವಳಿಕೆ ನೀಡಲಾಯಿತು.
ಸಭೆಯಲ್ಲಿ ಸ್ಥಳೀಯ ಮುಖಂಡರ ಜೊತೆ ಬಿಬಿಎಂಪಿ ಜಂಟಿ ಆಯುಕ್ತ ವೆಂಕಟಾಚಲಪತಿ, ಮುಖ್ಯ ಅಭಿಯಂತರ ವಿಶ್ವನಾಥ್, ಅಧೀಕ್ಷಕ ಅಭಿಯಂತರ ಕಬಾಡೆ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English