ಬೆಂಗಳೂರು : ಆಯುಷ್ ಇಲಾಖೆ ಹಮ್ಮಿಕೊಂಡಿರುವ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಉಪಸ್ಥಿತರಿದ್ದರು.
ಕೊರೋನಾ ಸಂಕಷ್ಟದ ಈ ಸಂದರ್ಭದಲ್ಲಿ ಯೋಗದ ಪಾತ್ರ ಮಹತ್ವವಾದದು. ಯೋಗಾಭ್ಯಾಸದಿಂದ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಬಲಗೊಳ್ಳುತ್ತದೆ. ವ್ಯಕ್ತಿತ್ವ ವಿಕಸನ, ಏಕಾಗ್ರತೆಯ ಜೊತೆಗೆ ಸಮಾಜ ನಿರ್ಮಾಣದಲ್ಲಿಯೂ ಯೋಗ ಸಹಕಾರಿಯಾಗಿದೆ. ಯೋಗ, ವ್ಯಾಯಾಮಗಳು ನಮ್ಮ ಜೀವನಕ್ರಮವಾಗಿರಲಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಮೂಲಕ ಇಳಿವಯಸ್ಸಿನಲ್ಲಿಯೂ ಯೋಗಾಭ್ಯಾಸ ಮಾಡಿ ಆರೋಗ್ಯವನ್ನು ಸದೃಢವಾಗಿಟ್ಟುಕೊಳ್ಳಿ, ದೈಹಿಕ-ಮಾನಸಿಕ ಆರೋಗ್ಯಕ್ಕೆ ಯೋಗ, ವ್ಯಾಯಾಮ ಕಸರತ್ತು ಮುಖ್ಯ ಎಂಬುದನ್ನು ತೋರಿಸಿಕೊಟ್ಟರು.
Click this button or press Ctrl+G to toggle between Kannada and English