ಮೂರನೇ ಅಲೆ ಸಂದರ್ಭದಲ್ಲಿ ಮಕ್ಕಳಿಗೆ ಹೆಚ್ಚಾಗಿ ಸೋಂಕು ತಗಲುವ ಸಾಧ್ಯತೆ ಇದೆ : ತಜ್ಞರ ಸಮಿತಿ ಸಲಹೆ

4:49 PM, Tuesday, June 22nd, 2021
Share
1 Star2 Stars3 Stars4 Stars5 Stars
(5 rating, 1 votes)
Loading...

yedyurappa ಬೆಂಗಳೂರು  :  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ  ಕೋವಿಡ್ 19 ಮೂರನೇ ಅಲೆ ತಡೆಗಟ್ಟಲು ರಚಿಸಿರುವ ಉನ್ನತ ಮಟ್ಟದ ತಜ್ಞರ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಸಭೆ ನಡೆಸಿದರು.

ಇದೆ ಸಂದರ್ಭದಲ್ಲಿ ಸಮಿತಿಯು ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿತು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ತಜ್ಞರ ಸಮಿತಿ ಅಧ್ಯಕ್ಷ ಡಾ: ದೇವಿಶೆಟ್ಟಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಸಭೆಯ ಮುಖ್ಯಾಂಶಗಳು :

ಮೂರನೇ ಅಲೆ ಸಂದರ್ಭದಲ್ಲಿ ಮಕ್ಕಳಿಗೆ ಹೆಚ್ಚಾಗಿ ಸೋಂಕು ತಗಲುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಜ್ಞರ ಸಮಿತಿಯು ಕೆಲವು ಶಿಫಾರಸುಗಳನ್ನು ಮಾಡಿದೆ.

ಜಿಲ್ಲೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ, ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಮಕ್ಕಳ ಹೆಚ್.ಡಿ.ಯು ಘಟಕ, ಮಕ್ಕಳ ತೀವ್ರ ನಿಗಾ ಘಟಕ ಸ್ಥಾಪನೆ, ಮಕ್ಕಳ ಆಸ್ಪತ್ರೆ ಸ್ಥಾಪನೆ ಕುರಿತು ಸಲಹೆ ನೀಡಿದೆ.

3ನೇ ಅಲೆ ತಡೆಗಟ್ಟಲು ಮಾನವ ಸಂಪನ್ಮೂಲ, ಆರ್ಥಿಕ ಸಂಪನ್ಮೂಲ ಹಾಗೂ ಪರಿಣತರ ನೆರವು ಪಡೆಯುವ ಕುರಿತು ಸಹ ಸಮಿತಿ ಸಲಹೆ ನೀಡಿದೆ. ವಿವಿಧ ವೈದ್ಯಕೀಯ ಸಂಘಟನೆಗಳ ಸಹಯೋಗದೊಂದಿಗೆ ವೈದ್ಯರು, ದಾದಿಯರ ಕೊರತೆ ನಿವಾರಣೆ, ರಾಜ್ಯದಲ್ಲಿರುವ ಎಲ್ಲ ಸ್ವಯಂ ಸೇವಾ ಸಂಸ್ಥೆಗಳ ನೆರವು ಪಡೆಯುವುದು, ಕಾರ್ಪೊರೇಟ್ ಸಂಸ್ಥೆಗಳ ಸಹಕಾರದಿಂದ ಸಂಪನ್ಮೂಲಗಳ ನೆರವು ಹಾಗೂ ಎಲ್ಲಕ್ಕಿಂತ ಮುಖ್ಯವಾಗಿ ಸಾರ್ವಜನಿಕರ ಸಹಭಾಗಿತ್ವ ಪಡೆಯುವ ಬಗ್ಗೆ ಸಲಹೆ ನೀಡಿದೆ.

ಅಪೌಷ್ಟಿಕತೆ ನಿವಾರಣೆಗೆ ಆದ್ಯತೆ ನೀಡುವಂತೆಯೂ ತಜ್ಞರ ಸಮಿತಿ ಸಲಹೆ ನೀಡಿದೆ.

ಕೋವಿಡ್ ಗೆ ತುತ್ತಾದ ಮಕ್ಕಳ ಮನೋಸ್ಥೈರ್ಯ ಹೆಚ್ಚಿಸಲು ಪ್ರತಿ ಆಸ್ಪತ್ರೆಯಲ್ಲಿ ಮನೋವೈದ್ಯರ ಸೇವೆ ಒದಗಿಸುವುದು ಸೂಕ್ತ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.

ಆಮ್ಲಜನಕ ಕೊರತೆ ನಿವಾರಣೆ ಕುರಿತು ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸಲಹೆ ನೀಡಿದೆ.

ಕೋವಿಡ್ ನಂತರ ತಲೆದೋರುವ ಆರೋಗ್ಯ ಸಮಸ್ಯೆಗಳ ಕುರಿತು ಎಚ್ಚರ ವಹಿಸುವ ಕುರಿತು ಹಾಗೂ ಕೋವಿಡ್ ಅಲ್ಲದೆ ಇತರ ಆರೋಗ್ಯ ಸಮಸ್ಯೆಗಳಿಗೂ ಆದ್ಯತೆ ನೀಡುವ ಅಗತ್ಯವಿದೆ.

ಮಕ್ಕಳಿಗೆ ಪರೀಕ್ಷೆ ನಡೆಸುವ ಬಗ್ಗೆ, ಕೋವಿಡ್ ಕೇರ್ ಸೆಂಟರುಗಳಲ್ಲಿರುವ ವ್ಯವಸ್ಥೆಗಳ ಕುರಿತು ಮಾಹಿತಿ ನೀಡಿದರು.

ಕೋವಿಡ್‌ ನಿಯಂತ್ರಣಕ್ಕೆ ಲಸಿಕೆ ಅತ್ಯಂತ ಸೂಕ್ತ ಪರಿಹಾರವಾಗಿದ್ದು, ಲಸಿಕೆ ಅಭಿಯಾನ ಇನ್ನಷ್ಟು ತೀವ್ರಗೊಳಿಸಲು ಸಲಹೆ ನೀಡಿದೆ.

ಶಾಲಾ ಕಾಲೇಜು ತೆರೆಯುವ ಬಗ್ಗೆ-

ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದಕ್ಕೆ ಲಸಿಕೆ ನೀಡಲು ಆದ್ಯತೆ ನೀಡುವಂತೆ ಸಲಹೆ ಮಾಡಲಾಗಿದೆ.

ಶಾಲಾ ಕಾಲೇಜುಗಳನ್ನು ಹಂತ ಹಂತವಾಗಿ ತೆರೆಯುವ ಬಗ್ಗೆ ಚಿಂತನೆ ನಡೆಸಲು ಸಮಿತಿ ಸಲಹೆ ಮಾಡಿದೆ.

18 ವಯಸ್ಸಿನ ಮೇಲಿನ ಮಕ್ಕಳಿಗೆ ಲಸಿಕೆ ನೀಡುವ ವ್ಯವಸ್ಥೆ ಮಾಡಿ ಕಾಲೇಜುಗಳನ್ನು ಪ್ರಾರಂಭಿಸುವ ಚಿಂತನೆ ನಡೆಸಲಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English