ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ

7:03 PM, Tuesday, June 22nd, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Vishwanath-Shettyಮಂಗಳೂರು  : ತಂದೆಯೇ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಂಗಳೂರಿನ ಜಪ್ಪಿನಮೊಗರು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.

ಮನೆಯ ದನಗಳನ್ನು ಹೊರಗಡೆ ಕಟ್ಟಿ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಗಿ ಈ ಘಟನೆ ನಡೆದಿದೆ.

ಕೊಪ್ಪರಿಗೆಗುತ್ತು ನಿವಾಸಿ ಆರೋಪಿ ವಿಶ್ವನಾಥ ಶೆಟ್ಟಿ (52) ಎಂಬಾತ ಮಗ ಸ್ವಾಮೀತ್ ಶೆಟ್ಟಿ (25) ಯನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆರೋಪಿಯಾಗಿದ್ದಾನೆ.

ಸ್ವಾಮೀತ್ ಶೆಟ್ಟಿ (25) ಸುಟ್ಟ ಗಾಯಗೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಕುದನಗಳನ್ನು ಹೊರಗಡೆ ಕಟ್ಟಿಹಾಕಿದ್ದ ಬಗ್ಗೆ ಸ್ವಾಮೀತ್ ಶೆಟ್ಟಿಯ ತಂದೆ ವಿಶ್ವನಾಥ ಶೆಟ್ಟಿ ತಕರಾರು ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದು ಬಳಿಕ ಪೆಟ್ರೊಲ್ ನ್ನು ಮಗನ ಮೈ ಮೇಲೆ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ವಿಶ್ವನಾಥ ಶೆಟ್ಟಿ ಯನ್ನು ಪೊಲೀಸರು ಬಂಧಿಸಿದ್ದಾರೆ.

vishwanath-Shetty

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English