ತುಂಗಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ಸಚಿವ ಕೆ.ಎಸ್.ಈಶ್ವರಪ್ಪ

7:48 PM, Wednesday, June 23rd, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Tunga Dam ಶಿವಮೊಗ್ಗ: ತುಂಗಾ ನದಿಯು ಶಾಂತ ರೀತಿಯಲ್ಲಿ ಹರಿಯಲು ಜಿಲ್ಲಾ ಉಸ್ತುವಾರಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಗಾಜನೂರಿನ ತುಂಗಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ್ದಾರೆ.

ಈ ಬಾರಿ ಉತ್ತಮ ಮಳೆಯಾದ್ದರಿಂದ ತುಂಗಾ ಜಲಾಶಯ ಕಳೆದ ತಿಂಗಳೇ ಭರ್ತಿಯಾಗಿತ್ತು. ಈ ಜಲಾಶಯ ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಕೆಗೆ ಆಧಾರವಾಗಿದೆ.

ಜಲಾಶಯ ಭರ್ತಿಯಾದ ಹಿನ್ನೆಲೆ ಸಚಿವ ಈಶ್ವರಪ್ಪ ಬಾಗಿನ ಸಮರ್ಪಿಸಿ, ಜಲಾಶಯದ ಬಳಿ ತುಂಗೆಗೆ ಪೂಜೆ ಸಲ್ಲಿಸಿದರು. ಈ ವೇಳೆ ಸಚಿವರಿಗೆ ಮೇಯರ್ ಸುನೀತಾ ಅಣ್ಣಪ್ಪ, ಉಪಮೇಯರ್ ಶಂಕರ್ ಗನ್ನಿ ಹಾಗೂ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.

Tunga Dam

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English