- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಎತ್ತಿನ ಮೇಲೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಹ ವೈರಲ್

siddaramaiah [1]ಗದಗ:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮಾನಿಗಳು ಕಾರ ಹುಣ್ಣಿಮೆಗೆ ಸಿಂಗಾರಗೊಂಡ ಎತ್ತಿನ ಮೇಲೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬರೆದು ಅಭಿಮಾನ ತೋರಿಸಿದ್ದಾರೆ.

ಗದಗ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಕಾರ ಹುಣ್ಣಿಮೆ ಪ್ರಯುಕ್ತ ಎತ್ತುಗಳನ್ನು ಸಿಂಗರಿಸಿ ಮೆರವಣಿಗೆ ಮಾಡುವ ಪ್ರತೀತಿ ಇದೆ. ಈ ಬಾರಿ ಕೂಡ ಸರಳವಾಗಿ ಗ್ರಾಮಸ್ಥರು ಕಾರ ಹುಣ್ಣಿಮೆ ಆಚರಿಸಿದ್ದಾರೆ. ಈ ಬಾರಿ ಎತ್ತಿಗೆ ಸಿಂಗರಿಸುವ ವೇಳೆ ಸಿದ್ದರಾಮಯ್ಯ ಅವರ ಅಭಿಮಾನಿಗಳು ಮುಂದಿನ ಸಿಎಂ ಸಿದ್ದರಾಮಯ್ಯ ಎಂಬ ಕ್ಯಾಂಪೇನ್ ಮಾಡಿ ಗಮನ ಸೆಳೆದಿದ್ದಾರೆ.

ಗ್ರಾಮದಲ್ಲಿ ಕಾರ ಹುಣ್ಣಿಮೆ ದಿನ ಕರಿ ಹರಿಯುವ ಸಂಪ್ರದಾಯಕ್ಕೆ ತಕ್ಕಂತೆ ಎತ್ತುಗಳನ್ನು ಸಿಂಗರಿಸಿ ಮೆರವಣಿಗೆ ಮಾಡಲಾಯಿತು. ಈ ಸಂದರ್ಭ ಮೆರವಣಿಗೆಗೆ ಸಿದ್ಧಗೊಳಿಸಿದ್ದ ಎತ್ತಿನ ಮೇಲೆ ಮುಂದಿನ ಸಿಎಂ ಸಿದ್ದರಾಮಯ್ಯ  ಎಂದು ಬರೆದು  ಗಮನ ಸೆಳೆಯಲಾಗಿತ್ತು. ಸಿಎಂ ಕ್ಯಾಪೇನ್‍ನ ಎತ್ತಿನ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಹರಿದಾಡುತ್ತಿದೆ.